ಬೆಂಗಳೂರಿನತ್ತ ರಾಘವೇಶ್ವರ ಶ್ರೀ
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಸಿಐಡಿ ವಿಚಾರಣೆಗೆ ಸೋಮವಾರ ಹಾಜರಾಗಲಿದ್ದಾರೆ...
ಬೆಂಗಳೂರು: ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಸಿಐಡಿ ವಿಚಾರಣೆಗೆ ಸೋಮವಾರ ಹಾಜರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಹೊನ್ನಾವರ ತಾಲೂಕಿನ ಕೆಕ್ಕಾರು ಮಠದಿಂದ ಹೊರಟಿರುವ ಶ್ರೀಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ.
ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧ ತನಿಖೆಗೆ ಗುರುವಾರ ಹೈಕೋರ್ಟ್ ಆದೇಶಿಸಿತ್ತು.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧ ಐಪಿಸಿ ಸೆಕ್ಷನ್ 506 ಹಾಗೂ 354ರ ಅಡಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬನಶಂಕರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಶ್ರೀಗಳು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆದರಿಕೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಗಾಯಕಿ ಪ್ರೇಮಲತಾ ದಿವಾಕರ್ ಪರವಾಗಿ ಪುತ್ರಿ ಅಂಶುಮತಿ ಶಾಸ್ತ್ರಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದರು.