ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ

ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿಯಾಗಿ ಕಾವೇರಿ ನದಿಗೆ 14 ಸಾವಿರ ಕ್ಯುಸೆಕ್ ನೀರು...

Mainashree
Updated On : 13 Oct 2014, 11:08 am

ಶ್ರೀರಂಗಪಟ್ಟಣ: ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿಯಾಗಿ ಕಾವೇರಿ ನದಿಗೆ 14 ಸಾವಿರ ಕ್ಯುಸೆಕ್ ನೀರು ಬಿಡುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಗರಿಷ್ಠ ಪ್ರಮಾಣದ ನೀರು ಕಾಯ್ದುಕೊಂಡು ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ ಎಂದು ಕೆಆರ್‌ಎಸ್ ಜಲಾಶಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಂಗರಾಜು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ ಎಂದು ಪಕ್ಷಿಧಾಮದ ವಲಯ ಅರಣ್ಯಾಧಿಕಾರಿ ಲಕ್ಷ್ಮೀಶ್ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement