ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಜಿಟಿಟಿಸಿ ನೌಕರರ ನಿವೃತ್ತಿ ವಯಸ್ಸು ಹೆಚ್ಚಿಸಲು ಧರಣಿ

ಸರ್ಕಾರಿ ಉಪಕರಣ ಮತ್ತು ತರಬೇತಿ ಸಂಸ್ಥೆ(ಜಿಟಿಟಿಸಿ) ನೌಕರರ ನಿವೃತ್ತಿ ವಯಸ್ಸನ್ನು...

Mainashree
Updated On : 14 Oct 2014, 10:04 am

ಕನ್ನಡಪ್ರಭವಾರ್ತೆ, ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಸಂಸ್ಥೆ(ಜಿಟಿಟಿಸಿ) ನೌಕರರ ನಿವೃತ್ತಿ ವಯಸ್ಸನ್ನು 60ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಶಾಸಕ ಸುರೇಶ್ ಕುಮಾರ್ ಸೋಮವಾರ ವಿಕಾಸಸೌಧದಲ್ಲಿ ಪ್ರತಿಭಟನೆ ನಡೆಸಿದರು.

ವಿಕಾಸಸೌಧದಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಅವರ ಕಚೇರಿ ಎದುರು ಧರಣಿ ನಡೆಸಿದ ಅವರು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60ಕ್ಕೆ ಹೆಚ್ಚಿಸಿದ್ದರೂ, ಜಿಟಿಟಿಸಿ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದ ಈ ಸ್ಥಿತಿ ನಿರ್ಮಾಣವಾಗಿದೆ.

ತಾವು ಸರ್ಕಾರಿ ನೌಕರರಾಗಿದ್ದುಕೊಂಡು ಜಿಟಿಟಿಸಿ ನೌಕರರನ್ನು ಮಾತ್ರ ಆ ಸೌಲಭ್ಯದಿಂದ ವಂಚಿಸುತ್ತಿರುವ ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಾನು ಈ ವಿಚಾರವನ್ನು ವಿಧಾನಮಂಡಲ ಕಲಾಪದಲ್ಲೂ ಪ್ರಸ್ತಾಪಿಸಿದ್ದೇನೆ. ಪ್ರಕಾಶ್ ಹುಕ್ಕೇರಿ ಅವರು ಸಚಿವರಾಗಿದ್ದಾಗ ಜಿಟಿಟಿಸಿ ನೌಕರರ ನಿವೃತ್ತಿ ವಯಸ್ಸನ್ನು 60ಕ್ಕೆ ಹೆಚ್ಚಿಸುವಂತೆ ಸೂಚನೆ ನೀಡಿದ್ದರು. ಆದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ಈ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುರೇಶ್‌ಕುಮಾರ್ ಪ್ರತಿಭಟನೆ ವಾಪಸ್ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement