ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಪ್ರೀತಿಗೆ ವಿರೋಧ: ಬಿಎಂಎಸ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಇಂಜಿನಿಯರಿಂಗ್ ...

Mainashree
Updated On : 14 Oct 2014, 12:39 pm

ಬೆಂಗಳೂರು: ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

ಜಗದೀಶ್ ಪಾಂಡೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಛತೀಸ್‌ಗಡದ ಮೂಲದ ಜಗದೀಶ್, ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದನು.

ತಾನು ಯುವತಿಯೋರ್ವಳನ್ನು ಪ್ರೀತಿಸುತ್ತಿರುವುದಾಗಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜಗದೀಶ್ ಡೆತ್ ನೋಟ್ ಬರೆದಿಟ್ಟು ಬಿಎಂಎಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement