ಮಲ್ಯ ವಿರುದ್ಧದ ಸಮನ್ಸ್ಗೆ ಹೈಕೋರ್ಟ್ ತಡೆಯಾಜ್ಞೆ
ಬಿಯರ್ ಬಾಟಲ್ ಮೇಲೆ ಎಂಆರ್ಪಿಗಿಂತ ಹೆಚ್ಚಿನ ಬೆಲೆಯ ಚೀಟಿ ಅಂಟಿಸಿ ಮಾರಾಟ ಮಾಡುತ್ತಿದ್ದ...
ಬೆಂಗಳೂರು: ಬಿಯರ್ ಬಾಟಲ್ ಮೇಲೆ ಎಂಆರ್ಪಿಗಿಂತ ಹೆಚ್ಚಿನ ಬೆಲೆಯ ಚೀಟಿ ಅಂಟಿಸಿ ಮಾರಾಟ ಮಾಡುತ್ತಿದ್ದ ಆರೋಪ ಸಂಬಂಧ ಉದ್ಯಮಿ ವಿಜಯ ಮಲ್ಯ ಸೇರಿ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪೆನಿಯ 12 ನಿರ್ದೇಶಕರಿಗೆ ಮಂಗಳೂರು ಜೆಎಂಎಫ್ಸಿ ನ್ಯಾಯಾಲಯ ನೀಡಿದ್ದ ಸಮನ್ಸ್ಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯ ನೀಡಿದ್ದ ಸಮನ್ಸ್ ರದ್ದು ಕೋರಿ ವಿಜಯ್ ಮಲ್ಯ ಮತ್ತಿತರರು ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ಪೀಠ ಈ ಆದೇಶ ಮಾಡಿದೆ. ಜತೆಗೆ, ಪ್ರಕರಣ ಕುರಿತು ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.