'ಸಾಂತ್ವನ ಯೋಜನೆ' ಜಾರಿಗೆ ಸರ್ಕಾರ ನಿರ್ಧಾರ
ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸಾ ವೆಚ್ಚ ಭರಿಸುವ ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಜಾರಿಗೆ ಸರ್ಕಾರ ತೀರ್ಮಾನಿಸಿದೆ.
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸಾ ವೆಚ್ಚ ಭರಿಸುವ ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಜಾರಿಗೆ ಸರ್ಕಾರ ತೀರ್ಮಾನಿಸಿದೆ.
ಇಂದು ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಸಂಬಂಧಿಸಿದಂತೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.
ಈ ಯೋಜನೆಯ ಜಾರಿಯಿಂದಾಗಿ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ 25 ಸಾವಿರದವರೆಗಿನ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.