ಚುನಾವಣಾ ಆಯೋಗಕ್ಕೆ ಶ್ರೀನಿವಾಸ್ ಆಚಾರ್ ಸಾರಥಿ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಮುಖ್ಯ ಆಯುಕ್ತರ ನೇಮಕ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೂ ಕಡತ ಯಜ್ಞಕ್ಕೆ ಚಾಲನೆ ನೀಡುವುದು ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಿ.ಆರ್ ಚಿಕ್ಕಮಠ್ ನಿವೃತ್ತಿ ನಂತರ ತೆರವಾಗಿದ್ದ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ್ ಆಚಾರ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಈ ವಿಷಯ ತಿಳಿಸಿದ್ದಾರೆ.