ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಜಯಾಗೆ ಜಾಮೀನು: ಪರಪ್ಪನ ಅಗ್ರಹಾರ ಬಳಿ ಬೆಂಬಲಿಗರ ಸಂಭ್ರಮ

Vishwanath S
Updated On : 17 Oct 2014, 1:53 am

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಸಿಗುತ್ತಿದ್ದಂತೆ ಜಯಾ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.

ಜಯಾ ಜಾಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿತ್ತು. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಬಳಿ ಇರುವ ಕೇಂದ್ರ ಕಾರಾಗೃಹದ ಬಳಿ ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು. ಜಯಲಲಿತಾಗೆ ಜಾಮೀನು ಮಂಜೂರು ಆಗುತ್ತಿದ್ದಂತೆ ನಗರದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಜಯಲಲಿತಾ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.

ತಮಿಳುನಾಡಿನಲ್ಲೂ ಗರಿಗೆದರಿದ ಸಂಭ್ರಮಾಚರಣೆ
ಸುಪ್ರೀಂಕೋರ್ಟ್‌ನಲ್ಲಿ ಜಯಾಗೆ ಜಾಮೀನು ಸಿಗುತ್ತಿದ್ದಂತೆ ತಮಿಳುನಾಡಿನಾದ್ಯಂತ ಎಐಎಡಿಎಂಕೆ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಹರ್ಷೋದ್ಗಾರ ಮನೆ ಮಾಡಿದೆ. ಕಪ್ಪುಪಟ್ಟಿಗೆ ಬೆಂಕಿ ಹಚ್ಚುವುದರ ಮೂಲಕ ಅಭಿಮಾನಿಗಳು ಹರ್ಷವ್ಯಕ್ತಪಡಿಸಿದರು. ರಸ್ತೆಗಿಳಿದಿರುವ ಅಭಿಮಾನಿಗಳು ಜಯಾ ಪರ ಘೋಷಣೆಗಳನ್ನು ಕೂಗುತ್ತಾ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement