ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಹೆಗ್ಗಡೆ ಅವಹೇಳನ ಪ್ರಕರಣ ದಾಖಲು

ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಮಾಧ್ಯಮಗಳಲ್ಲಿ ತನ್ನ...

Mainashree
Updated On : 20 Oct 2014, 8:49 am

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಮಾಧ್ಯಮಗಳಲ್ಲಿ ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಅವಮಾನ ಮಾಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು, ದ.ಕ ಜಿಲ್ಲಾ ಎಸ್‌ಪಿಗೆ ನೀಡಿದ ದೂರಿನ ಅನ್ವಯ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಧರ್ಮಸ್ಥಳದ ಬಳಿ ನಡೆದ ಕೆಲವು ಘಟನೆಗಳನ್ನು ನೆಪವಾಗಿ ಇಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ತಮ್ಮ ಬಗ್ಗೆ ಟಿ.ವಿ ಮಾಧ್ಯಮಗಳಲ್ಲಿ ಕಳೆದ 1 ವರ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ಆರೋಪ ಮಾಡುತ್ತಾ ಬಂದಿದ್ದಾರೆ.

ಸರ್ಕಾರ, ಕಾನೂನು, ಪೊಲೀಸ್ ಮೊದಲಾದ ರಾಜ್ಯದ ಉನ್ನತ ಮಟ್ಟದ ಇಲಾಖೆಗಳನ್ನು ದೂರುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಸುಳ್ಳು ಮಾಹಿತಿ ಹರಡುತ್ತಿದೆ.

ಜು.24ರಂದು ಪ್ರಸಾರವಾದ ಖಾಸಗಿ ವಾಹಿನಿಯ ಸಂದರ್ಶನದಲ್ಲೂ ತಿಮರೋಡಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement