ಶಿವಮೊಗ್ಗ ಡಿಸಿಯಿಂದ ತರಾಟೆ: ನೊಂದ ಎಫ್ಡಿಎ ಆತ್ಮಹತ್ಯೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕ ಪಂಚಾಯ್ತಿ ಕಾರ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ(ಎಫ್ಡಿಎ)ನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವರಾಜ್ ನಾಯಕ್ ಎಂಬ ಯುವಕ ಸೋಮವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿದ್ದು, ಯುವಕನ ಸಾವಿಗೆ ನಿಕರ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ನಿನ್ನೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಅವರು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಆರೋಪದ ಹಿನ್ನೆಲೆಯಲ್ಲಿ ಯುವರಾಜ್ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ನೊಂದ ಯುವಕ ಇಂದು ಕಚೇರಿಯಲ್ಲೇ ಕಚೇರಿಯಲ್ಲೇ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.