ರಾಜ್ಯದಲ್ಲಿ ಚು.ಫಲಿತಾಂಶ ಯಾವುದೇ ಪರಿಣಾಮ ಬೀರಲ್ಲ: ಸಚಿವ ಆಂಜನೇಯ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೂ ಜನತೆ ಕಾಂಗ್ರೆಸ್‌ಗೆ ಬೆಂಬಲಿಸಲಿದ್ದಾರೆ...
ಬೆಂಗಳೂರು: ರಾಜ್ಯದಲ್ಲಿ ಈಗ ಚುನಾವಣೆ ನಡೆದರೂ ಜನತೆ ಕಾಂಗ್ರೆಸ್‌ಗೆ ಬೆಂಬಲಿಸಲಿದ್ದಾರೆ ಎಂದು ಸಚಿವ ಆಂಜನೇಯ ಸೋಮವಾರ ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಹರ್ಯಾಣದ ವಿಧಾನಸಭಾ ಚುನಾವಣೆ ಫಲಿತಾಂಶ ನಮ್ಮ ರಾಜ್ಯದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಮುಕ್ತ ದೇಶವನ್ನಾಗಿಸುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಅದು ಎಂದಿಗೂ ಸಾಧ್ಯವಿಲ್ಲ. ಸೂರ್ಯ ಚಂದ್ರ ಇರುವವರೆಗೂ ಅದು ಸಾಧ್ಯವಿಲ್ಲ ಎಂದ ಅವರು, ದೇಶದಲ್ಲಿ ರಾಹುಲ್ ಹಠಾವೋ ಪ್ರಶ್ನೆಯೇ ಇಲ್ಲ ಎಂದು ಆಂಜನೇಯ ಹೇಳಿದ್ದಾರೆ.
ಬಿಜೆಪಿ ನಿನ್ನೆ ಮೊನ್ನೆ ಹುಟ್ಟಿದ ಪಕ್ಷ. ಆದರೆ ಕಾಂಗ್ರೆಸ್ ಪಕ್ಷ ನಿನ್ನೆ ಮೊನ್ನೆ ಹುಟ್ಟಿದ್ದಲ್ಲ. ಬಿಜೆಪಿಯ ಕನಸು ನನಸಾಗುವುದಿಲ್ಲ. ಯಾವುದೇ ರಾಜ್ಯಗಳಲ್ಲಿ ಗೆಲುವು ಸಾಧಿಸಿದರೇ, ಎಲ್ಲಾ ರಾಜ್ಯಗಳಲ್ಲೂ ಇದು ಪರಿಣಾಮ ಬೀಳಲಿದೆ ಎಂದು ಬಿಜೆಪಿ ನಾಯಕರು ಭ್ರಮೆಯಲ್ಲಿದ್ದರೆ, ಅದು ಮೂರ್ಖತನ. ಏಕೆಂದರೆ ನಮ್ಮ ರಾಜ್ಯದಲ್ಲಿ ಈಗಲೂ ಚುನಾವಣೆ ನಡೆದರೆ, ಜನತೆ ನಮಗೆ ಬಹುಮತ ನೀಡಲಿದ್ದಾರೆ ಎಂದು ಆಂಜನೇಯ ಭರವಸೆ ವ್ಯಕ್ತಪಡಿಸಿದ್ದಾರೆ.