ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಬಾಲಕಿ ಮೇಲೆ ಅತ್ಯಾಚಾರ?

ಜೀವನ ಪಾಠ ಕಲಿಸುವ ಶಾಲೆಗಳಲ್ಲೇ ಮುಗ್ಧ ಮಕ್ಕಳ ಮೇಲೆ ಅತ್ಯಾಚಾರವಾದರೆ, ರಕ್ಷಣೆ ಕೊಡುವವರು ಇನ್ಯಾರು?

Rashmi Kasaragodu
Updated On : 22 Oct 2014, 10:17 am

ಬೆಂಗಳೂರು: ಜೀವನ ಪಾಠ ಕಲಿಸುವ ಶಾಲೆಗಳಲ್ಲೇ ಮುಗ್ಧ ಮಕ್ಕಳ ಮೇಲೆ ಅತ್ಯಾಚಾರವಾದರೆ, ರಕ್ಷಣೆ ಕೊಡುವವರು ಇನ್ಯಾರು?

ಹೌದು, ವರ್ತೂರಿನ ವೆಬ್‌ಗ್ಯೋರ್ ಶಾಲೆಯಲ್ಲಿನ ಘಟನೆ ಮಾಸುವ ಮುನ್ನವೇ ನಗರದ ಮತ್ತೊಂದು ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಸಂಜೆ ಶಾಲೆ ಬಿಟ್ಟು ಮನೆಗೆ ಬಂದ ಆಕೆಯ ಗುಪ್ತಾಂಗದಲ್ಲಿ ಕೆಲ ಗಾಯಗಳಾಗಿರುವುದು ತಾಯಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ವಿಚಾರಿಸಿ, ಯಶವಂತಪುರದಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ.
ವೈದ್ಯರ ಪರೀಕ್ಷೆ ನಡೆಸಿದ್ದು, ಮೇಲ್ನೋಟಕ್ಕೆ ಅತ್ಯಾಚಾರವಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಲಹಳ್ಳಿ ಪೊಲೀಸ್ ಠಾಣೆಗೆ ತೆರಳಿದ ವಿದ್ಯಾರ್ಥಿನಿಯ ಪೋಷಕರು ದೂರು ನೀಡಿದ್ದಾರೆ.
ಶಾಲೆಯಲ್ಲಿ ವಿಚಾರಣೆ: ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಶಾಲೆಗೆ ತೆರಳಿ ತೀವ್ರ ವಿಚಾರಣೆ ನಡೆಸಿದ್ದಾರೆ. ಶಾಲೆಯ ಆಡಳಿತ ಮಂಡಳಿ, ಸಿಬ್ಬಂದಿಯನ್ನು ವಿಚಾರಣೆ ನಡೆಸಿ, ಮಾಹಿತಿ ಪಡೆದಿದ್ದಾರೆ. ಈ ವಿಚಾರಣೆ ಮಂಗಳವಾರ ತಡರಾತ್ರಿವರೆಗೂ ಮುಂದುವರಿದಿತ್ತು. ಘಟನೆ ಸಂಬಂಧ ಈಗಾಗಲೇ ಪೊಲೀಸರು ಕೆಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement