ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಬಾಲಕಿ ಮೇಲೆ ಅತ್ಯಾಚಾರ: ಆರ್ಕಿಡ್ಸ್ ನ ಅಟೆಂಡರ್ ಗುಂಡಣ್ಣ ಬಂಧನ

ಆರ್ಕಿಡ್ಸ್ ಇಂಟರ್ ನ್ಯಾಷನಲ್...

Mainashree
Updated On : 23 Oct 2014, 11:03 am

ಬೆಂಗಳೂರು: ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಶಾಲೆಯ ಅಟೆಂಡರ್ ಹಾಗೂ ಬಸ್ ಕ್ಲೀನರ್ ಗುಂಡಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.

ಆರ್ಕಿಡ್ಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಪೋಷಕರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಪೊಲೀಸರು ಫೋಟೋ ತೋರಿಸಿದ್ದಾರೆ. ಫೋಟೋದಲ್ಲಿ ಶಾಲೆಯ ಅಂಟೆಡರ್ ಅನ್ನು ಗುರುತಿಸಿದೆ. ಈ ಅಂಕಲ್ ನನ್ನನ್ನು ಹೊಡೆದಿದ್ದು ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಡಣ್ಣನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಾಲೆಗಳಲ್ಲಿ 8 ಸಿಸಿಟಿವಿಗಳನ್ನು ಅಳವಡಿಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮುಗಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಕ್ಷಣೆ ನೀಡಬೇಕಾದ ಶಾಲೆಗಳಲ್ಲಿ ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿರುವುದು ವಿಷಾಧನೀಯ. ವರ್ತೂರಿನ ವೆಬ್‌ಗ್ಯೋರ್ ಶಾಲೆಯಲ್ಲಿನ ಘಟನೆ ಮಾಸುವ ಮುನ್ನವೇ ನಗರದ ಮತ್ತೊಂದು ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ.

ಸಂಜೆ ಶಾಲೆ ಬಿಟ್ಟು ಮನೆಗೆ ಬಂದ ಆಕೆಯ ಗುಪ್ತಾಂಗದಲ್ಲಿ ಕೆಲ ಗಾಯಗಳಾಗಿರವುದು ತಾಯಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ವಿಚಾರಿಸಿ, ಯಶವಂತಪುರದಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ. ವೈದ್ಯರ ಪರೀಕ್ಷೆ ನಡೆಸಿದ್ದು, ಮೇಲ್ನೋಟಕ್ಕೆ ಅತ್ಯಾಚಾರವಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement