ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಬಸವನಬಾಗೇವಾಡಿ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಬಿಜಾಪುರದ ಬಸವನಬಾಗೇವಾಡಿ ತಾಲೂಕಿನ ಗುಡದಿಮ್ಮಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರೇಣುಕಪ್ಪ ಸುಣಗಾರ(75), ಯಲ್ಲವ್ವ(55) ಮತ್ತು ಗಂಗಾಬಾಯಿ(27) ಎಂದು ಗುರುತಿಸಲಾಗಿದೆ.
ಸಾಲಭಾದೆ ತಾಳಲಾರದೆ ಮೂವರು ಒಟ್ಟಿಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಮಿಡಗುಂದಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.