ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಭೆ

ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯನವರು...

Updated On : 26 Oct 2014, 9:51 am

ಬೆಂಗಳೂರು: ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪೂರ್ವಭಾವಿ ಸಭೆ ನಡೆಸಿದರು. ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಬರಹಗಾರರು ಮತ್ತು ಕ್ಯಾಬಿನೆಟ್ ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರು.

ಪ್ರಶಸ್ತಿಗೆ ಹೆಸರನ್ನು ಪಟ್ಟಿ ಮಾಡಲು ಯಾವ ಮಾನದಂಡ ಉಪಯೋಗಿಸಬೇಕು ಮತ್ತು ಎಷ್ಟು ಜನರನ್ನು ಆಯ್ಕೆ ಮಾಡಬೇಕು ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯವರಲ್ಲದೆ, ಸಮಿತಿಯ ಮುಖ್ಯಸ್ಥ ಕೆ ಮರಳುಸಿದ್ಧಪ್ಪ, ಗೃಹ ಸಚಿವ ಕೆ ಜೆ ಜಾರ್ಜ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ನಗರಾಭಿವೃದ್ದಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಇಂಧನ ಸಚಿವ ಡಿ ಕೆ ಶಿವಕುಮಾರ್ ಕೂಡ ಉಪಸ್ಥಿತರಿದ್ದರು.

ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಸಿದ್ಧರಾಮಯ್ಯ ಪ್ರಶಸ್ತಿ ವಿಜೇತ ಪಟ್ಟಿಗೆ ಅಂತಿಮ ರೂಪ ಕೊಡಲು ಒಂದೆರಡು ದಿನಗಳಲ್ಲಿ ಮತ್ತೆ ಸಭೆ ಸೇರಲು ನಿರ್ಣಯಿಸಿದರು.

ಕಳೆದ ವರ್ಷ ರಾಜ್ಯಸರ್ಕಾರ ೫೮ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿತ್ತು. ಈ ವರ್ಷ ಸಂಖ್ಯೆ ದೊಡ್ಡದಾಗಬಹುದೆಂಬ ನಿರೀಕ್ಷೆಯಿದೆ. ಅಂತಿಮ ಪಟ್ಟಿಯನ್ನು ಮುಂದಿವ ವಾರ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement