ಪರಪ್ಪನ ಅಗ್ರಹಾರದಲ್ಲಿ ಖೈದಿ ಆತ್ಮಹತ್ಯೆ
ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಯೊಬ್ಬ ಕತ್ತುಕೊಯ್ದುಕೊಂಡು...
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಯೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಬೆಂಗಳೂರಿನ ಪೀಣ್ಯ 2ನೇ ಹಂತದ ನಿವಾಸಿ ರವಿಕುಮಾರ್(26) ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡಕಾಯಿತಿ ಪ್ರಕರಣದಲ್ಲಿ ರಾಜಗೋಪಾಲನಗರ ಠಾಣೆ ಪೊಲೀಸರು ರವಿಕುಮಾರ್‌ನನ್ನು ಬಂಧಿಸಿದ್ದರು.
ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿಕುಮಾರ್, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ. ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.