ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ವಿಷಪ್ರಾಶನಕ್ಕೆ ಗುರಿಯಾಗಿದ್ದ ಅಪ್ರಾಪ್ತ ಬಾಲಕಿ ಸಾವು

Vishwanath S
Updated On : 1 Nov 2014, 5:34 am

ಉಡುಪಿ: ಕಳೆದ ತಿಂಗಳ 29ರಂದು ಮೂವರಿಂದ ಅಪಹರಣಕ್ಕೀಡಾಗಿ ವಿಷಪ್ರಾಶನಕ್ಕೆ ಒಳಗಾಗಿದ್ದ ಅಪ್ರಾಪ್ತ ಬಾಲಕಿ ಇಂದು ಉಡುಪಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಅಪ್ರಾಪ್ತ ಬಾಲಕಿಯೊಬ್ಬಳನ್ನು ಮೂವರು ದುಷ್ಕರ್ಮಿಗಳು ಶಿವಮೊಗ್ಗ ಅಪಹರಿಸಿ ತೀರ್ಥಹಳ್ಳಿಯ ಆನಂದ ಗಿರಿ ಬೆಟ್ಟಕ್ಕೆ ಕರೆದೊಯ್ದು ವಿಷಪ್ರಾಶನ ಮಾಡಿದ್ದರು. ವಿಷಪ್ರಾಶನದಿಂದ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಚಿಕಿತ್ಸೆ ವೇಳೆ ಬಾಲಕಿ ತನ್ನ ತಂದೆಗೆ ತನ್ನನ್ನು ಮೂವರು ದುಷ್ಕರ್ಮಿಗಳು ಅಪಹರಿಸಿ ಗುಡ್ಡ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿದ್ದರು ಎಂದು ಹೇಳಿದ್ದಳು. ಹೀಗಾಗಿ ಬಾಲಕಿ ತಂದೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ವಿಷಪ್ರಾಶನ ಮಾಡಿದ ನಂತರ ಅತ್ಯಾಚಾರ ನಡೆಸಿರಬಹುದು ಎಂದು ಶಂಕಿಸಲಾಗಿದೆ.

ಓರ್ವ ಆರೋಪಿ ಬಂಧನ
ಅಪ್ರಾಪ್ತ ಬಾಲಕಿಯನ್ನು ಶಿವಮೊಗ್ಗದಿಂದ ಅಪಹರಿಸಿ ತೀರ್ಥಹಳ್ಳಿಯ ಆನಂದಗಿರಿ ಬೆಟ್ಟದಲ್ಲಿ ಬಾಲಕಿಗೆ ವಿಷಪ್ರಾಶನ ಮಾಡಿ ಕೊಲೆ ಮಾಡಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement