ಕಾರ್ತಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈತ್ರಿಯಾ ಗೌಡ ಮತ್ತು ಕಾರ್ತಿಕ್‌ಗೌಡ ಅವರ ವಿವಾ(ದ)ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಮುಂದೂಡಿದೆ.
ಕೇಂದ್ರ ರೇಲ್ವೇ ಸಚಿವ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ನಟಿ ಮೈತ್ರಿಯಾ ಗೌಡ ಅವರು ಅತ್ಯಾಚಾರ, ಅಪಹರಣ ಪ್ರಕರಣಗಳ ಅಡಿಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಕಾರ್ತಿಕ್ ಗೌಡ ಅವರು ನಿರೀಕ್ಷಣಾ ಜಾಮೀನು ಬಯಸಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇದಕ್ಕೂ ಮೊದಲು ಪ್ರಕರಣದ ಆರೋಪಿಯಾಗಿರುವ ಕಾರ್ತಿಕ್ ಅವರು ಪ್ರಾಸಿಕ್ಯೂಷನ್‌ಗೆ ಸಹಕರಿಸಬೇಕು ಎಂದು ಕೋರಿ ಮೈತ್ರಿಯಾ ಪರ ವಕೀಲ ಆಕರ್ಷ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೇ ವೇಳೆ ಕಾರ್ತಿಕ್ ವಿರುದ್ಧ ನ್ಯಾಯಾಲಯ ಹೊರಡಿಸಿದ್ದ ಬಂಧನ ವಾರಂಟ್ ಆರ್‌ಟಿನಗರ ಪೊಲೀಸರ ಕೈ ಸೇರಿದ್ದು, ನಾಳಿನ ನ್ಯಾಯಾಲಯದ ಕಲಾಪದ ನಂತರ ಕಾರ್ತಿಕ್ ಅವರ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.