ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಅತ್ಯಾಚಾರಿಗಳ ಕೈ ಕತ್ತರಿಸಿ: ಪ್ರಮೋದ್ ಮುತಾಲಿಕ್

Vishwanath S
Updated On : 5 Sept 2014, 2:37 am

ರಾಯಚೂರು: ದಿನೇ ದಿನೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು, ಇದರ ವಿರುದ್ಧ ಕಿಡಿಕಾರಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಅತ್ಯಾಚಾರಿಗಳ ಕೈ ಕತ್ತರಿಸಿ ಎಂಬ ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಹೊರತು ಅತ್ಯಾಚಾರಿಗಳಿಗೆ ಶಿಕ್ಷೆಯಾಗುತ್ತಿಲ್ಲ ಇದರಿಂದಾಗಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದರೆ ಮೊದಲು ಅತ್ಯಾಚಾರದಿಂದ ನೊಂದವರ ಹೆತ್ತವರು ಅತ್ಯಾಚಾರಿಗಳ ಕೈ ಕತ್ತರಿಸಬೇಕು ಇಂತಹ ಕೃತ್ಯಕ್ಕೆ ಶ್ರೀರಾಮಸೇನೆ ಬೆಂಬಲ ನೀಡುತ್ತದೆ ಎಂದಿದ್ದಾರೆ.

ಇದೇ ವೇಳೆ, ಪಾಕಿಸ್ತಾನ ವಿರುದ್ಧ ಗರಂ ಆದ ಮುತಾಲಿಕ್, ಗಡಿಯಲ್ಲಿ ಪಾಕ್ ಸೈನಿಕರು ಪುಂಡಾಟಿಕೆ ನಡೆಸುತ್ತಿದ್ದರು ಇದಕ್ಕೆ ಭಾರತ ತಕ್ಕ ಉತ್ತರ ನೀಡುತ್ತಿಲ್ಲ ಇದರಿಂದಾಗಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಸಹ ಗುಂಡಿನ ದಾಳಿ ನಡೆಸಿ ಪಾಕ್‌ಗೆ ತಕ್ಕ ಉತ್ತರ ನೀಡಬೇಕು ಎಂದರು.

ಅಲ್-ಖೈದಾ ಉಗ್ರ ಸಂಘಟನೆ ಭಾರತದಲ್ಲಿ ವಿಸ್ತರಿಸುವುದಾಗಿ ಅಲ್-ಖೈದಾ ಮುಖಂಡ ಜವಾಹಿರಿ ಬೆದರಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಮುತಾಲಿಕ್, ಅಲ್-ಖೈದಾ ಉಗ್ರರು ದೇಶದೊಳಗೆ ನುಗ್ಗದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement