ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಸಿಕ್ತಲ್ಲಪ್ಪೋ ಜಾಮೀನು

ಉದ್ದೇಶಪೂರ್ವಕವಾಗಿ ಪ್ರಖ್ಯಾತ ವೈದ್ಯರೊಬ್ಬರನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡು 1 ಕೋಟಿ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಿ...

Srinivasa Murthy VN
Updated On : 5 Sept 2014, 1:36 am

ಬೆಂಗಳೂರು: ಉದ್ದೇಶಪೂರ್ವಕವಾಗಿ ಪ್ರಖ್ಯಾತ ವೈದ್ಯರೊಬ್ಬರನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡು 1 ಕೋಟಿ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಎದುರಿಸುತ್ತಿರುವ 'ಕೊಟ್ಲಲ್ಲಪ್ಪೋ ಕೈ' ಚಿತ್ರದ ನಟಿ ನಯನಾ ಕೃಷ್ಣಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟಿ ನಯನಾಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದಳು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಆರ್.ಬಿ.ಬೂದಿಹಾಳ್ ಅವರ ಪೀಠ, ನಯನಾ ಕೃಷ್ಣ ಹಾಗೂ ಆಕೆಯ ಸಹಾಯಕಿ ಸೋನಾ ಅಲಿಯಾಸ್ ರಿಯಾ ಅವರಿಗೆ ತಲಾ 25 ಸಾವಿರ ಬಾಂಡ್ ಹಾಗೂ ಒಬ್ಬ ವ್ಯಕ್ತಿಯ ಶ್ಯೂರಿಟಿ ನೀಡುವಂತೆ ಸೂಚಿಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅಲ್ಲದೇ ಆದೇಶದ ಪ್ರತಿ ಕೈ ಸೇರಿದ 30 ದಿನಗಳಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಅಧೀನ ನ್ಯಾಯಾಲಯಕ್ಕೆ ಬಾಂಡ್‌ನ ಮೊತ್ತ ಪಾವತಿಸುವಂತೆ ಸೂಚಿಸಿದೆ. ಈ ಕೃತ್ಯಕ್ಕೆ ಸಹಕಾರ ನೀಡಿದ ಆರೋಪ ಎದುರಿಸುತ್ತಿರುವ ಪೊಲೀಸ್ ಪೇದೆ ಮಲ್ಲೇಶ್ ಎಂಬುವವರ ಜಾಮೀನು ಅರ್ಜಿ ವಜಾಗೊಳಿಸಿದ್ದು, ತನಿಖೆ ಪೂರ್ಣಗೊಂಡು ಆರೋಪ ಪಟ್ಟಿ ಸಲ್ಲಿಕೆಯಾದ ನಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ನೇರಭಾಗಿ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿಲ್ಲ. ಆದರೆ, ಬಂಧಿತ ಆರೋಪಿ ಮಲ್ಲೇಶ್ ಹೇಳಿಕೆಯೇ ಸಾಕ್ಷಿಯಾಗಿದೆ. ಹೀಗಾಗಿ ಜಾಮೀನು ನೀಡಬೇಕು ಎಂದು ನಯನಾ ಕೃಷ್ಣ ಪರವಕೀಲರು ವಾದ ಮಂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement