ಕಾರ್ತಿಕ್ ಜಾಮೀನು ಅರ್ಜಿ: ಸೆ.8ಕ್ಕೆ ತೀರ್ಪು ಮುಂದೂಡಿಕೆ
ಬೆಂಗಳೂರು: ಮೈತ್ರಿಯಾ ಗೌಡ ಮತ್ತು ಕಾರ್ತಿಕ್ಗೌಡ ಅವರ ವಿವಾ(ದ)ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.
ಕೇಂದ್ರ ರೇಲ್ವೇ ಸಚಿವ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಮತ್ತು ನಟಿ ಮೈತ್ರಿಯಾಗೌಡ ವಿವಾ(ದ)ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಮುದಿಗೌಡರ್ ಅವರು ತೀರ್ಪನ್ನು ಸೆ.8ಕ್ಕೆ ಕಾಯ್ದಿರಿಸಿದ್ದಾರೆ.
ಕಾರ್ತಿಕ್ ಗೌಡ ತಮ್ಮನ್ನು ವಿವಾಹವಾಗಿದ್ದು, ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ನಟಿ ಮೈತ್ರಿಯಾ ಗೌಡ ಅವರು ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಡಿವಿಎಸ್ ಪುತ್ರ ಕಾರ್ತಿಕ್ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ವಂಚನೆ ಪ್ರಕರಣಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್ ಅವರಿಗೆ ಸಮನ್ಸ್ ಕೂಡ ನೀಡಿದ್ದರು. ಆದರೆ ಕಾರ್ತಿಕ್ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಅವರ ವಿರುದ್ಧ ವಾರಂಟ್ ಜಾರಿ ಮಾಡಲಾಗಿತ್ತು.
ಪ್ರಕರಣ ಸಂಬಂಧ ಕಾರ್ತಿಕ್ ಗೌಡ ಅವರು ಕೂಡ ನಿರೀಕ್ಷಣಾ ಜಾಮೀನು ಬಯಸಿ ಅರ್ಜಿ ಸಲ್ಲಿಸಿದ್ದರು. ಇಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ತನ್ನ ಆದೇಶವನ್ನು ಸೋಮವಾರಕ್ಕೆ ಕಾಯ್ದಿರಿಸಿದೆ.