ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಸಿಂಧನೂರು: ತಾಲೂಕಿನ ಆರ್.ಎಚ್.ಕ್ಯಾಂಪ್ 4ರ ಮಹಿಳೆ ಮೇಲೆ ಆಟೋ ಚಾಲಕ ಮತ್ತು ಆತನ ಇಬ್ಬರು ಸಹಚರರು ಶುಕ್ರವಾರ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.
28 ವರ್ಷದ ಮಹಿಳೆಯು ಈರಣ್ಣ ಕ್ಯಾಂಪಿನ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಈಕೆ ಆಟೋದಲ್ಲಿ ಸಿಂಧನೂರಿಗೆ ತೆರಳುತ್ತಿದ್ದ ವೇಳೆ ಪೋತ್ಸಾಳ ರಸ್ತೆಯ ಹೊಲವೊಂದಕ್ಕೆ ಆಖೆಯನ್ನು ಕರೆದೊಯ್ದು ಆಟೋದ ಚಾಲಕ ಮತ್ತು ಆತನ ಇಬ್ಬರು ಸಹಚರರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ಆಕೆಯನ್ನು ಸಿಂಧನೂರಿನ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರ್ಲಕ್ಷ್ಯ: ಅತ್ಯಾಚಾರಕ್ಕೆ ಒಳಗಾದ ಮಹಿಳೆಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದೂ ವೈದ್ಯರಿಲ್ಲದೆ ಅರ್ಧ ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆಗೆ ದೊರೆಯಲಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ರವಾನೆಯಾಗಿ, ಆನಂತರವೇ ವೈದ್ಯರು ಧಾವಿಸಿ ಬಂದು ಚಿಕಿತ್ಸೆ ನೀಡಿದ್ದಾರೆಂದು ತಿಳಿದು ಬಂದಿದೆ.