ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಶಾಸಕರು ಸೂಚಿಸಿದವರೇ ಜೆಡಿಎಸ್ ರಾಜ್ಯಾಧ್ಯಕ್ಷ: ದೇವೇಗೌಡ ಘೋಷಣೆ

ಜೆಡಿಎಸ್ ರಾಜ್ಯಾಧ್ಯಕ್ಷ ಯಾರಾಗಬೇಕು ಎಂಬುದನ್ನು ಪಕ್ಷದ 40 ಶಾಸಕರು ಹಾಗೂ 12 ವಿಧಾನ ಪರಿಷತ್...

Mainashree
Updated On : 9 Sept 2014, 9:22 am

ತುಮಕೂರು: ಜೆಡಿಎಸ್ ರಾಜ್ಯಾಧ್ಯಕ್ಷ ಯಾರಾಗಬೇಕು ಎಂಬುದನ್ನು ಪಕ್ಷದ 40 ಶಾಸಕರು ಹಾಗೂ 12 ವಿಧಾನ ಪರಿಷತ್ ಸದಸ್ಯರು ನಿರ್ಧರಿಸುತ್ತಾರೆ ಎಂದು ಪಕ್ಷದ ವರಿಷ್ಠ ನಾಯಕ ಎಚ್.ಡಿ ದೇವೇಗೌಡ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರ ಹೆಸರನ್ನು ಸೂಚಿಸುತ್ತಾರೋ ಆ ಹೆಸರನ್ನು ಘೋಷಣೆ ಮಾಡುತ್ತೇನೆ. ಜೆಡಿಎಸ್‌ನಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಬಿಕ್ಕಟ್ಟು ಸೃಷ್ಟಿಸಿರುವುದು ಮಾಧ್ಯಮಗಳು. ನಾನಿನ್ನೂ ಜೀವಂತವಾಗಿದ್ದೇನೆ. ಪಕ್ಷವನ್ನು ಹೇಗೆ ಹ್ಯಾಂಡಲ್ ಮಾಡಬೇಕೆಂಬುದು ನನಗೆ ಗೊತ್ತು ಎಂದು ಖಚಿತವಾಗಿ ಹೇಳಿದರು.

ಜನತಾ ಪರಿವಾರವನ್ನು ಯಾರಾದರೂ ಒಗ್ಗೂಡಿಸಲು ಪ್ರಯತ್ನಿಸಿದರೆ ನಾನು ಸಹಕಾರ ನೀಡಲು ಸಿದ್ಧ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement