ಹಾಡುಹಗಲೇ ರೌಡಿಶೀಟರ್ ಅರುಣ್ ಕಗ್ಗೋಲೆ
ತಾವರೆಕೆರೆ: ಹಾಡಹಗಲೇ ರೌಡಿಶೀಟರ್ ಅರುಣ್ ಎಂಬುವವನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರಿನ ಕುರುಬರಹಳ್ಳಿ ನಿವಾಸಿ ಅರುಣ್(27)ನನ್ನು ಇಂದು ಬೆಳಗ್ಗೆ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯಾವ ಕಾರಣಕ್ಕೆ ಅರುಣ್ನ ಕೊಲೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ.
ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಕುರುಬರಹಳ್ಳಿಯ ನಿವಾಸಿಯಾಗಿರುವ ಅರುಣ್ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿದ್ದವು.
ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.