ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕಾಂಗ್ರೆಸ್ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು: ಎಸ್.ಎಂ.ಕೃಷ್ಣ

ಕಡಿಮೆ ಸ್ಥಾನ ಹೊಂದಿರುವ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಹೇಳಿದ್ದಾರೆ.

Srinivasa Murthy VN
Updated On : 10 Sept 2014, 8:19 am

ಮೈಸೂರು: ಕಡಿಮೆ ಸ್ಥಾನ ಹೊಂದಿರುವ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೃಷ್ಣ ಅವರು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ 'ಲೋಕಸಭಾ ಚುನಾವಣೆಯಲ್ಲಿ ನಾವು ಕಡಿಮೆ ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಕೇವಲ 44 ಸ್ಥಾನಗಳನ್ನು ನಾವು ಹೊಂದಿದ್ದೇವೆ. ಹೀಗಿರುವಾಗ ನಾವು ಪ್ರತಿಪಕ್ಷ ಸ್ಥಾನವನ್ನು ಕೇಳುವುದು ಸರಿಯಲ್ಲ. ನಿಯಮಗಳ ಪ್ರಕಾರ ಪ್ರತಿಪಕ್ಷ ಸ್ಥಾನಕ್ಕಾಗಿ ಶೇ.10 ಸ್ಥಾನಗಳನ್ನು ಹೊಂದಿರಬೇಕು. ಆದರೆ ನಾವು ಕೇವಲ 44 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ನಮಗಾಗಿ ನಿಯಮಾವಳಿಯನ್ನು ಬದಲಿಸಿ ಎನ್ನುವುದು ತಪ್ಪು. ಪ್ರಜಾಪ್ರಭುತ್ವ ನಿಯಮಗಳನ್ನು ನಾವು ಒಪ್ಪಿಕೊಳ್ಳಬೇಕು' ಎಂದು ಕೃಷ್ಣ ಹೇಳಿದ್ದಾರೆ.

ಇದಕ್ಕೂ ಮೊದಲು ತಾವು ಮುಖ್ಯಮಂತ್ರಿಯಾಗಿದ್ದ ಕ್ಷಣಗಳನ್ನು ಸ್ಮರಿಸಿದ ಕೃಷ್ಣ ಅವರು, 'ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಪ್ರಮುಖವಾಗಿ ರಾಜ್ಯದಲ್ಲಿ ನೀರಿನ ಸಮಸ್ಯೆ ಬಂದಾಗಲೆಲ್ಲಾ ಮತ್ತು ಕಾವೇರಿ ವಿಚಾರವಾಗಿ ನನಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕಾಣ್ತಾರೆ' ಎಂದು ಕೃಷ್ಣ ತಮ್ಮ ಅಧಿಕಾರದ ಅವಧಿಯನ್ನು ನೆನಪು ಮಾಡಿಕೊಂಡರು.

ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಕಾಂಗ್ರೆಸ್ ಪಕ್ಷ ಇದೀಗ ಪ್ರತಿಪಕ್ಷ ಸ್ಥಾನಕ್ಕಾಗಿ ಪಟ್ಟುಹಿಡಿದಿದ್ದು, ಈ ಹಿಂದೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಲ್ಲಿ ಈ ಬಗ್ಗೆ ಮನವಿ ಸಲ್ಲಿಸಿತ್ತು. ಆದರೆ ಸೋನಿಯಾ ಅವರ ಮನವಿಯನ್ನು ನಯವಾಗಿ ತಿರಸ್ಕರಿಸಿದ್ದ ಸುಮಿತ್ರಾ ಮಹಾಜನ್ ಅವರು ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಪ್ರಕರಣದಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೊಳಗಾಗಿದ್ದು, ಈಗಲೂ ಪ್ರತಿಪಕ್ಷ ಸ್ಥಾನಕ್ಕಾಗಿ ತನ್ನ ಪ್ರಯತ್ನವನ್ನು ಮುಂದುವರೆಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement