ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕಾಟಾಚಾರದ ಸಮೀಕ್ಷೆ ನಡೆಸಿದ ಸಿಎಂ

Vishwanath S
Updated On : 11 Sept 2014, 10:47 am

ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿಯನ್ನು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿಲ್ಲ. ಕಾಟಾಚಾರಕ್ಕೆ ಮುಖ್ಯಮಂತ್ರಿ ಪ್ರವಾಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಮೊದಲ ಸುತ್ತಿನಲ್ಲಿ ರಾಯಚೂರಿಗೆ ಪ್ರವಾಸ ಬೆಳೆಸಿದರೂ ಪ್ರಯೋಜನಕ್ಕೆ ಬಾರದೆ ಸುತ್ತಾಡಿಕೊಂಡು ಬೆಂಗಳೂರಿಗೆ ಹಿಂತಿರುಗಿದ್ದರು. ಈಗ ಗದಗ ಹಾಗೂ ಧಾರವಾಡಕ್ಕೆ ಆಗಮಿಸಿದ ಮುಖ್ಯಮಂತ್ರಿ ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ಸಂತ್ರಸ್ತರ ನೋವು ಕೇಳದೆ ರಾಜಧಾನಿಗೆ ಬಂದಿದ್ದಾರೆ. ಎಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಬುಧವಾರ ಹೇಳಿದರು.

ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಮಾತನ್ನೂ ಆಡಿಲ್ಲ. ಕೇವಲ ಕೇಂದ್ರ ಸರ್ಕಾರ ನೀಡುವ ಪರಿಹಾರ ಮೊತ್ತಕ್ಕೆ ಕಾಯಲಾಗುತ್ತಿದೆ. ಹಾಗಿದ್ದರೆ ರಾಜ್ಯ ಸರ್ಕಾರಕ್ಕೆ ಯಾವುದೇ ಜವಾಬ್ದಾರಿಯಿಲ್ಲವೇ ಎಂದು ಪ್ರಶ್ನಿಸಿದರು.

ಬಡವರಿಗೆ ಮಾತ್ರ ಕಾನೂನು ಅನ್ವಯ: ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಉತ್ತರಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಕೊಳೆಗೇರಿ ಹಾಗೂ ಬಗರ್ ಹುಕುಂ ಹಿಡುವಳಿದಾರರಿಗೆ ಜಾಗ ಖಾಲಿ ಮಾಡುವಂತೆ ರಾಜ್ಯ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಆದರೆ ಈ ವಿಚಾರ ನನಗೆ ತಿಳಿದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬ ಸಾಮಾನ್ಯ ಜ್ಞಾನವೂ ಮುಖ್ಯಮಂತ್ರಿಗಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ರಾಜಾಕಾಲುವೆ ಮೇಲೆ ಕಟ್ಟಡ ನಿರ್ಮಿಸಿರುವ ಕೋಟ್ಯಧಿಪತಿಗಳಿಗೆ ನೋಟಿಸ್ ನೀಡುವ ಧೈರ್ಯ ರಾಜ್ಯ ಸರ್ಕಾರಕ್ಕಿಲ್ಲ. ಆದರೆ ಕಳೆದ 3-4 ದಶಕಗಳಿಂದ ವಾಸವಾಗಿರುವ ಬಡವರನ್ನು ಓಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಬಡವರ ಹೆಸರು ಹೇಳಿಕೊಂಡು ಮತ ಕೇಳುವ ಸರ್ಕಾರದ ನೈಜ ಬಣ್ಣವಿದು ಎಂದು ಅವರು ಕುಟುಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement