ಡಿ.ಕೆ.ಸುರೇಶ್ ವಿರುದ್ಧ ಚಾರ್ಜ್‌ಶೀಟ್ ದಾಖಲು
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ.ಸುರೇಶ್ ಅವರ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಚಾರ್ಜ್‌ಶೀಟ್ ದಾಖಲಿಸಿದ್ದಾರೆ.
ಸುರೇಶ್ ಮಾಲೀಕತ್ವದ ಕಂಪನಿ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಕೋಟೆಕೊಪ್ಪದ ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಗ್ರಾನೈಟ್ ಗಣಿಗಾರಿಕೆ ನಡೆಸಿ, ಸರ್ಕಾರಕ್ಕೆ 91 ಲಕ್ಷದಷ್ಟು ನಷ್ಟ ಉಂಟು ಮಾಡಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಆರೋಪಿಸಲಾಗಿದೆ.
ಸಂಸದ ಡಿ.ಕೆ.ಸುರೇಶ್ ಒಡೆತನದ ಕಂಪನಿಯೂ ಕೋಟೆಕೊಪ್ಪದ ಮುನೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿರುವ ಸರ್ವೇ ನಂ.9ರಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವುದನ್ನು ಅರಣ್ಯ ಇಲಾಖೆ ಪತ್ತೆ ಮಾಡಿದ್ದು, ಈ ಅಕ್ರಮ ಗಣಿಗಾರಿಕೆಯಿಂದ ಇಲಾಖೆಗೆ 91 ಲಕ್ಷ ನಷ್ಟವಾಗಿದೆ ಎಂದು ಉಲ್ಲೇಖಿಸಿ ಕನಕಪುರ ವಲಯ ಅರಣ್ಯ ಅಧಿಕಾರಿಗಳು ಸುರೇಶ್ ವಿರುದ್ಧ ಕನಕಪುರ ಜೆಎಂಎಫ್‌ಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.