ದಾವಣಗೆರೆಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು
ದಾವಣಗೆರೆಯಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ದಾವಣಗೆರೆ: ದಾವಣಗೆರೆಯಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೊಲ್ಲರಹಳ್ಳಿ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಬೈಕ್ ಸವಾರರಾದ 40 ವರ್ಷದ ಮಹದೇವಪ್ಪ ಮತ್ತು 23 ವರ್ಷದ ಇದಾಯಿ ವುಲ್ಲಾಹ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗೊಲ್ಲರಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಎರಡೂ ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಮಿತಿ ಮೀರಿದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.