ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬೇಡ: ಜಮೀರ್
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನನಗೆ ಬೇಡ ಎಂದು ಚಾಮರಾಜಪೇಟೆಯ ಜೆಡಿಎಸ್ ಶಾಸಕ ಜಮೀರ್...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನನಗೆ ಬೇಡ ಎಂದು ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಗುರುವಾರ ಹೇಳಿದ್ದಾರೆ.
ಜೆಡಿಎಸ್ನಲ್ಲಿ ಇತ್ತೀಚಿನ ಬೆಳವಣಿಗೆ ಬೇಸರ ತಂದಿದೆ. ಹೀಗಾಗಿ, ಕೋರ್ ಕಮಿಟಿಯಲ್ಲಿ ಸ್ಥಾನ ನೀಡಿದರೂ ಬೇಡ, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನನಗೆ ಬೇಡ ಎಂದು ಜಮೀರ್ ತಿಳಿಸಿದ್ದಾರೆ.
ನಾನು ನನ್ನ ಕ್ಷೇತ್ರದ ಮತದಾರರಿಗೆ ನನ್ನನ್ನು ಸೀಮಿತಗೊಳಿಸುವೆ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಹಾಗಂತ, ಜೆಡಿಎಸ್ ತೊರೆಯುವ ಯಾವುದೇ ಚಿಂತನೆ ನಡೆಸಿಲ್ಲ ಎಂದು ಜಮೀರ್ ಸ್ಪಷ್ಟಪಡಿಸಿದ್ದಾರೆ.
ನಾನು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗಳಸ್ಯ-ಕಂಠಸ್ಯರಿದ್ದೇವೆ. ಹೀಗಾಗಿ ನಮ್ಮ ನಡುವೆ ಭಿನ್ನಭಿಪ್ರಾಯ ಸಹಜ ಎಂದು ಜಮೀರ್ ಹೇಳಿದ್ದಾರೆ.