ಅಕ್ರಮ ಕಲ್ಲು ಗಣಿಗಾರಿಕೆ: ಸಂಸದ ಡಿ.ಕೆ ಸುರೇಶ್ಗೆ ನೋಟೀಸ್ ಜಾರಿ
ಅಕ್ರಮ ಕಲ್ಲು ಗಣಿಗಾರಿಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಸೇರಿದಂತೆ...
ಬೆಂಗಳೂರು: ಅಕ್ರಮ ಕಲ್ಲು ಗಣಿಗಾರಿಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಸೇರಿದಂತೆ 20 ಕಂಪನಿಗಳಿಗೆ ಅರಣ್ಯ ಇಲಾಖೆ ನೋಟೀಸ್ ಜಾರಿ ಮಾಡಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರಿನಲ್ಲಿ ಅರಣ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಡಿ.ಕೆ ಸುರೇಶ್ ಅವರಿಗೆ ನೋಟೀಸ್ ಜಾರಿ ಮಾಡಿದ್ದು, ಸೆ.22ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸುರೇಶ್ಗೆ ಅರಣ್ಯ ಇಲಾಖೆ ಸೂಚಿಸಿದೆ.
ಸಾತನೂರಿನ ಅರಣ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಸಂಬಂಧ ತನಿಖೆ ನಡೆಸುತ್ತಿರುವ ಅರಣ್ಯ ಇಲಾಖೆ ಈ ಸಂಬಂಧ ವಿಚಾರಣೆಗಾಗಿ ಡಿ.ಕೆ ಸುರೇಶ್ ಹಾಗೂ ಮೈಸೂರು ಮಿನರಲ್ಸ್ ಕಂಪನಿ ಸೇರಿ 20 ಕಂಪನಿಗಳಿಗೆ ನೋಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿದೆ.
ವಿಚಾರಣೆಗೆ ಸುರೇಶ್ ಖುದ್ದು ಹಾಜರಾಗದಿದ್ದರೆ, ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ.