ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

24ರಂದು ಇಸ್ರೋ ಕೇಂದ್ರಕ್ಕೆ ಮೋದಿ

ಇಸ್ರೋ ಮಂಗಳಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗುವುದು ಖಾತ್ರಿಯಾಗಿದ್ದು, ಸೆ.24ರ...

Mainashree
Updated On : 21 Sept 2014, 10:40 am

ಬೆಂಗಳೂರು: ಇಸ್ರೋ ಮಂಗಳಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗುವುದು ಖಾತ್ರಿಯಾಗಿದ್ದು, ಸೆ.24ರ ಬೆಳಗ್ಗೆ 5.45ಕ್ಕೆ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಸೆ.23ಕ್ಕೆ ಸಂಜೆ 5.30ಕ್ಕೆ ಆಗಮಿಸುವ ಪ್ರಧಾನಿ, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿರುವ ಮೋದಿ, ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳೊಂದಿಗೆ ಚರ್ಚಿಸುವ ಸಾಧ್ಯತೆಯಿದೆ. ಸೆ.24ರ ಬೆಳಗ್ಗೆ 5.45 ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಮಂಗಳಯಾನ ನೌಕೆಯು ಮಂಗಳನ ಕಕ್ಷೆಗೆ ಸೇರುವ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ, ರಾಜ್ಯಪಾಲರು ಹಾಗೂ ಕೇಂದ್ರ ಸಚಿವರು ಪ್ರಧಾನಿಗೆ ಸಾಥ್ ನೀಡಲಿದ್ದಾರೆ ಎಂದು ಇಸ್ರೋ ಮೂಲಗಳು ತಿಳಿಸಿವೆ. ನೌಕೆಯು ಮಂಗಳ ಕಕ್ಷೆಗೆ ಸೇರಿದ ಬಳಿಕ 8 ಗಂಟೆ ಸುಮಾರಿಗೆ ಅವರು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಿಂದ ಹೆಲಿಕಾಫ್ಟರ್ ಮೂಲಕ ತುಮಕೂರಿಗೆ ಫುಡ್ ಪಾರ್ಕ್ ಉದ್ಘಾಟನೆಗೆ ತೆರಳಲಿದ್ದಾರೆ. ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಪೀಣ್ಯದ ಇಸ್ರೋ ಕೇಂದ್ರಕ್ಕೆ ಸಚಿವ ಸದಾನಂದಗೌಡ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ ಸಿದ್ಧತೆ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ.

ಸ್ವಾಗತಕ್ಕೆ ಅದ್ಧೂರಿ ಸಿದ್ಧತೆ: ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ ಸ್ವಾಗತಕ್ಕೆ ರಾಜ್ಯ ಬಿಜೆಪಿ ಘಟಕ ಸಜ್ಜಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣದ ಬಳಿಯೇ ಕಾರ್ಯಕರ್ತರ ಸಭೆ ನಡೆಸಿ ಪ್ರಧಾನಿಯ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿಯ ಎಲ್ಲ ಮುಖಂಡರು, ಸಂಸದರು, ಶಾಸಕರು ಹಾಗೂ ಕೇಂದ್ರ ಸಚಿವರು ಹಾಜರಿರಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement