ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯಲ್ಲಿ ಬೆಂಕಿ
ಶಾರ್ಟ್ ಸರ್ಕ್ಯೂಟ್ನಿಂದಾಗಿ ಸಾಫ್ಟ್ವೇರ್ ಕಂಪನಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ...
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಸಾಫ್ಟ್ವೇರ್ ಕಂಪನಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ನಗರದ ಮಡಿವಾಳದ ಜಂಕ್ಷನ್ ಬಳಿಯಿರುವ ಸಾಫ್ಟ್ವೇರ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಸುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 5 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.