ಮೊದಲು ಬಿಎಸ್ವೈ ಕ್ಷಮೆ ಕೇಳಲಿ
ರೈತರನ್ನು ಒಕ್ಕಲೆಬ್ಬಿಸುವುದರ ವಿರುದ್ಧ ಹೋರಾಟ ಮಾಡುತ್ತೇವೆಂದು ಸಂಸದ ಬಿ.ಎಸ್ ಯಡಿಯೂರಪ್ಪ...
ಸಾಗರ: ರೈತರನ್ನು ಒಕ್ಕಲೆಬ್ಬಿಸುವುದರ ವಿರುದ್ಧ ಹೋರಾಟ ಮಾಡುತ್ತೇವೆಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿರುವುದು ಅಚ್ಚರಿ ತಂದಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ 192 ಎ ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು ಜೈಲಿಗೆ ಕಳಿಸುವ ಕೆಲಸ ಮಾಡಲಾಗಿದೆ. ವಿಧಾನಸಭೆಯಲ್ಲಿ ಈ ಕುರಿತು ಬಾಯಿ ಬಿಡದ ಯಡಿಯೂರಪ್ಪ ಈಗ ಹೋರಾಟದ ಮಾತನ್ನು ಆಡುತ್ತಿದ್ದಾರೆ ಎಂದು ವಿಧಾನಸಭಾದ್ಯಕ್ಷ ಕಾಗೋಡು ತಿಮ್ಮಪ್ಪ ಟೀಕಿಸಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಈ ಕರಾಳ ಶಾಸನ ಜಾರಿಗೆ ತಂದು ಜನರಿಗೆ ಮಾಡಿರುವ ಅನ್ಯಾಯಕ್ಕೆ ಮೊದಲು ಕ್ಷಮಾಪಮೆ ಕೇಳಲಿ ಎಂದು ಕಾಗೋಡು ಹೇಳಿದರು.
ಸಿಗಂದೂರಿಗೆ ಬರುವ ಪ್ರವಾಸಿಗರಿಗಾಗಿ ರು.3 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಸಮೀಪ ಸಿಗಂದೂರೇಶ್ವರಿ ಯಾತ್ರಿ ನಿವಾಸ ಮಾಡಲು ಪ್ರಸ್ತಾವ ಸಲ್ಲಿಸಲಾಗಿದೆ. ಇದರ ಜತೆಗೆ ರು.3 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಸಂಪರ್ಕ ರಸ್ತೆಯನ್ನು ದ್ವಿಪಥ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲಾಗುವುದು. ಈ ಕುರಿತು ಹಣ ಬಿಡುಗಡೆಗಾಗಿ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.