ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ತಾಕತ್ತಿದ್ದರೆ ರೈತರ ಮೈ ಮುಟ್ಟಿ: ಸರ್ಕಾರಕ್ಕೆ ಈಶ್ವರಪ್ಪ ಸವಾಲು

ಬಗರ್‌ಹುಕುಂ ರೈತರಿಗೆ ನೋಟಿಸ್ ನೀಡಿ ರಾಜ್ಯ ಸರ್ಕಾರ ವಿನಾಕಾರಣ ಗೊಂದಲ ಎಬ್ಬಿಸುತ್ತಿದೆ...

Mainashree
Updated On : 28 Sept 2014, 10:32 am

ಶಿವಮೊಗ್ಗ: ಬಗರ್‌ಹುಕುಂ ರೈತರಿಗೆ ನೋಟಿಸ್ ನೀಡಿ ರಾಜ್ಯ ಸರ್ಕಾರ ವಿನಾಕಾರಣ ಗೊಂದಲ ಎಬ್ಬಿಸುತ್ತಿದೆ. ತಾಕತ್ತಿದ್ದರೆ ಒಬ್ಬ ರೈತನನ್ನು ಮುಟ್ಟಿ ನೋಡಲಿ ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಸಿಎಂ ಅವರು ಬಗರ್‌ಹುಕುಂ ರೈತರ ಪರ ಹೋರಾಟ ಮಾಡಿದ ಮುಖಂಡರು, ಪ್ರತಿಪಕ್ಷಗಳ ಮುಖಂಡರ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ. ಎಲ್ಲರೂ ಕೂಡಿ ಸಮಸ್ಯೆ ಪರಿಹರಿಸೋಣ ಎಂದು ಹೇಳುತ್ತಿದ್ದೇವೆ. ಇದು ರೈತರ ಸಮಸ್ಯೆ, ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದೆಂಬುದಷ್ಟೇ ನಮ್ಮ ಕಾಳಜಿ ಎಂದರು.

ಬಗರ್‌ಹುಕುಂ ಸಮಿತಿ ಇನ್ನೂ ಅನೇಕ ಕಡೆ ರಚನೆಯಾಗಿಲ್ಲ. ಯಾವುದು ಕಂದಾಯ ಭೂಮಿ, ಯಾವುದು ಅರಣ್ಯಭೂಮಿ ಎಂಬುದೇ ನಿರ್ಧಾರವಾಗಿಲ್ಲ. ಈ ಮಧ್ಯೆಯೇ ಸರ್ಕಾರ ನೋಟಿಸ್ ಕೊಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement