ಬೆಂಗಳೂರು: ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಒಮ್ಮೆ ಶಿಕ್ಷಣ ಸಂಸ್ಥೆಗೆ ಅಲ್ಪಸಂಖ್ಯಾತ ಎಂದು ಘೋಷಿಸಿ ಪ್ರಮಾಣ ಪತ್ರ ನೀಡಿದ ನಂತರ ಮತ್ತೆ ರಾಜ್ಯ ಸರ್ಕಾರ ಕೂಡ ಅಲ್ಪಸಂಖ್ಯಾತ ಎಂದು ಘೋಷಿಸಬೇಕೇ ಎಂಬುದು ಪ್ರಶ್ನೆಯಾಗಿದೆ. ಈ ಕುರಿತು ಮುಂದಿನ ವಿಚಾರಣೆ ವೇಳೆ ಮಾ ಹಿತಿ ನೀಡಿದಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯ ಸರ್ಕಾರವು ಈ ಹಿಂದೆ ಅಲ್ಪಸಂಖ್ಯಾತ ಸಂಸ್ಥೆಗಳೆಂದು ಪರಿಗಣಿಸಲು ಶೇ.75 ಅನುಪಾತದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸಂಖ್ಯೆ ಇರಬೇಕೆಂದು ಆದೇಶಿಸಿತ್ತು. ತದನಂತರ ಇತ್ತೀಚೆಗೆ ಅದನ್ನು ಮಾರ್ಪಾಡು ಮಾಡಿ ಶೇ.25 ಅನುಪಾತಕ್ಕೆ ಪರಿಗಣಿಸಿ ಆದೇಶ ಹೊರ ಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಹೈ ಕೋರ್ಟ್ ಮೆಟ್ಟಿಲೇರಿತ್ತು.
ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಪೀಠ, ಅರ್ಜಿ ದಾರರ ಸುಪರ್ದಿಗೆ ಒಳಪಡುವ ಶಾಲೆಗಳ ವಿವರ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ, ಪ್ರಮಾಣ ಪತ್ರ ನೀಡಿದ ಪ್ರಾಧಿಕಾರ ಹಾಗೂ ಶಾಲೆಗಳ ವಿಳಾಸ ಒಳಗೊಂಡ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿವಿಚಾರಣೆ ಏ.8ಕ್ಕೆ ಮುಂದೂಡಿದೆ.