ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಫಘಾತವಾಗಿದ್ದು, ಮೂವರನ್ನು ಬಲಿ ಪಡೆದಿದೆ.
ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಕಾರಿನಲ್ಲಿ ಮಂಡ್ಯದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಮೃತಪಟ್ಟವರನ್ನು ಮಂಡ್ಯ ಮೂಲದ ಚಿಕ್ಕಮರಿಗೌಡ(60), ಕುಮಾರಿ(45) ಹಾಗೂ ಮಳವಳ್ಳಿ ಮೂಲದ ಚಾಲಕ ಮಹಾದೇವಪ್ಪ(40) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮತ್ತೋರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.