ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಪ್ತಪದಿ ತುಳಿದ ಹೆಂಡತಿಯನ್ನೇ ಪತಿರಾಯ ಚಾಕುವಿನಿಂದ ಇರಿದು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನೆಲೆಸಿರುವ 40 ವರ್ಷದ ಕೃಷ್ಣಮೂರ್ತಿ 32 ವರ್ಷದ ಪತ್ನಿ ರಾಣಿಯನ್ನು ಎಂಬುವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಕೊಲೆ ಆರೋಪಿ 40 ವರ್ಷದ ಕೃಷ್ಣಮೂರ್ತಿ ಇದೀಗ ಪೊಲೀಸರ ಅತಿಥಿಯಾಗಿದ್ದು, ಪೊಲೀಸರು ಕೃಷ್ಣಮೂರ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ.
ಕೊಲೆ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.