ಬೆಂಗಳೂರು: ಕೋರಮಗಲದ 6ನೇ ಬ್ಲಾಕ್‍ನ 17 ನೇ ಮುಖ್ಯರಸ್ತೆಯ ಮನೆಯೊಂದರ ಆವರಣದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ವಾಹನಕ್ಕೆ ದುಷ್ಕರ್ಮಿಗಳು ರಾತ್ರಿ ಬೆಂಕಿ ಹಚ್ಚಿದ್ದಾರೆ.
ಗುರುವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಘಟನೆ ನಡೆದಿದೆ. ದ್ವಿಚಕ್ರ ವಾಹನ ಕೋಮಲ್ ಎಂಬುವವರಿಗೆ ಸೇರಿದ್ದಾಗಿದ್ದು, ಈ ಸಂಬಂಧ ಕೋರಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.