ಬೈಕ್ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ 
ಜಿಲ್ಲಾ ಸುದ್ದಿ

ಬೈಕ್ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ

ಮಹಾನಗರಗಳಲ್ಲಿ ಅಪಘಾತಕ್ಕೀಡಾದವರನ್ನು ಸಕಾಲಕ್ಕೆ ತಲುಪಿ ತುರ್ತು ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ `ಬೈಕ್ ಆ್ಯಂಬುಲೆನ್ಸ್ 24x7' ಸೇವೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ...

ಬೆಂಗಳೂರು: ಏಷ್ಯಾದಲ್ಲಿಯೇ ಮೊಟ್ಟಮೊದಲ ಬೈಕ್ ಆ್ಯಂಬುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. 

ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೈಕ್ ಆ್ಯಂಬುಲೆನ್ಸ್ 24x7 ಸೇವೆಗೆ ಚಾಲನೆ ನೀಡಿದ್ದಾರೆ.

ಅಪಘಾತಕ್ಕೀಡಾದವರನ್ನು ಸಕಾಲಕ್ಕೆ ತಲುಪಿ ತುರ್ತು ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರ `ಬೈಕ್ ಆ್ಯಂಬುಲೆನ್ಸ್ 24x7' ಸೇವೆ ಜಾರಿಗೆ ತರುತ್ತಿದ್ದು, ಏಷ್ಯಾದಲ್ಲಿಯೇ ಮೊಟ್ಟಮೊದಲ ಬೈಕ್ ಆ್ಯಂಬುಲೆನ್ಸ್ ಇದಾಗಿದೆ. 

ರು.175 ಲಕ್ಷ ವೆಚ್ಚದಲ್ಲಿ 30 ಬೈಕ್ ಆ್ಯಂಬುಲೆನ್ಸ್ ಸಿದ್ಧವಾಗಿದ್ದು, 21 ಆ್ಯಂಬುಲೆನ್ಸ್ ಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿವೆ. 108  ಆರೋಗ್ಯ ಕವಚ ಅಡಿಯಲ್ಲೇ ಈ ಸೇವೆಯನ್ನೂ ಸೇರಿಸಲಾಗಿದೆ. ಸಾರ್ವಜನಿಕರು 108  ಸಂಖ್ಯೆಗೆ ಕರೆ ಮಾಡಿದ ನಂತರ ವಾಹನ ದಟ್ಟಣೆ ಹೆಚ್ಚಿರುವ ಹಾಗೂ ನಾಲ್ಕು ಚಕ್ರದ ಆ್ಯಂಬುಲೆನ್ಸ್ ತಲುಪಲು ಸಾಧ್ಯವಾಗದ ಸ್ಥಳಗಳಿಗೆ ಬೈಕ್ ಕಳುಹಿಸಲಾಗುತ್ತದೆ.

ಪ್ಲಾಟಿನಂ ಮಿನಿಟ್ ಯೋಜನೆ ಎಂಬ ಹೆಸರಿನಲ್ಲಿ ಈ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾರಿಗೆ ತರುತ್ತಿದ್ದು, ಬೈಕ್ ಆ್ಯಂಬುಲೆನ್ಸ್ ಸೇವೆಗಾಗಿ ಆವೆಂಜರ್ ಬೈಕ್ ಬಳಕೆಯಾಗುತ್ತಿದೆ. ಈ ಬೈಕ್ ನ ಬೆಲೆ 2 ಲಕ್ಷ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!