ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಹಿಳೆಯ ಕೊಲೆ: ಕರವೇ ಮುಖಂಡನ ಬಂಧನ

ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಮಹಿಳೆ, `ಮದುವೆಯಾಗು' ಎಂದು ಒತ್ತಾಯಿಸಿದ್ದಕ್ಕೆ ಕುಪಿತಗೊಂಡ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡನೊಬ್ಬ ಆಕೆಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ನಿಗೂಢ ಕೊಲೆ ಪ್ರಕರಣವನ್ನು ತಲಘಟ್ಟಪುರ ಪೊಲೀಸರು ಭೇದಿಸಿದ್ದಾರೆ...

ಬೆಂಗಳೂರು: ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಮಹಿಳೆ, `ಮದುವೆಯಾಗು' ಎಂದು ಒತ್ತಾಯಿಸಿದ್ದಕ್ಕೆ ಕುಪಿತಗೊಂಡ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡನೊಬ್ಬ ಆಕೆಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ನಿಗೂಢ ಕೊಲೆ ಪ್ರಕರಣವನ್ನು ತಲಘಟ್ಟಪುರ ಪೊಲೀಸರು ಭೇದಿಸಿದ್ದಾರೆ.

ಕರವೇ ಮುಖಂಡ, ಜೆಪಿ ನಗರ 6ನೇ ಹಂತ ನಿವಾಸಿ ಯೋಗೇಶ್ ಸಾಗರ್(38), ಕೊಲೆಗೆ ಸಹಕರಿಸಿದ ಯೋಗೇಶ್ ಸಂಬಂಧಿ ಗುರುಲಿಂಗ (40)ಬಂಧಿತರು. ತಲಘಟ್ಟಪುರ ಸಮೀಪದ ತಿಪ್ಪಸಂದ್ರದಲ್ಲಿ ಶಿಲ್ಪಾ (35) ಎಂಬಾಕೆಯನ್ನು ಯೋಗೇಶ್ ಕೊಲೆ ಮಾಡಿ, ಗುರುಲಿಂಗನ ನೆರವಿನೊಂದಿಗೆ ಶವವನ್ನು ಕಾರಿನಲ್ಲಿ ಹಾಕಿಕೊಂಡು ತುಮಕೂರು ಜಿಲ್ಲೆ ಕೊಂಡ್ಲಿ ಕ್ರಾಸ್ ಸಮೀಪದ ಗಣಿಗಾರಿಕೆ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಯೋಗೇಶ್, ಶಿಲ್ಪಾ ಮನೆಯಲ್ಲಿ ವೇಶ್ಯಾವಾಟಿಕೆಯನ್ನೂ ನಡೆಸುತ್ತಿದ್ದ ಎನ್ನುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಶಿಲ್ಪಾ ನಾಪತ್ತೆಯಾಗಿರುವ ಬಗ್ಗೆ ಸಹೋದರಿ ಕನಕಮ್ಮ ತಲಘಟ್ಟಪುರ ಠಾಣೆಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!