ಬೆಂಗಳೂರು: ರಾಜ್ಯ ಸರ್ಕಾರ ನೌಕರರ ವರ್ಗಕ್ಕೆ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಇದು ಜಾರಿಗೆ ಬರಲಿದೆ. ನೌಕರರಿಗೆ ಪ್ರಸ್ತುತ ಶೇಕಡಾ 25.25ರಷ್ಟು ತುಟ್ಟಿಭತ್ಯೆ ನೀಡಲಾಗುತ್ತಿತ್ತು. ಈಗ ಅದು ಶೇಕಡಾ 28.75ಕ್ಕೆ ಏರಿದೆ.
ಮೇ 30ರೊಳಗೆ ಬೃಹತ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಇಂದು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಇದರಿಂದ ಸರ್ಕಾರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲವಕಾಶ ಸಿಕ್ಕಂತಾಗಿದ್ದು, ಇದರ ನಡುವೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.