ಅಸಾದುದ್ದೀನ್ ಒವೈಸಿ 
ಜಿಲ್ಲಾ ಸುದ್ದಿ

ಒವೈಸಿ ನಿರ್ಬಂಧಕ್ಕೆ ಹೈಕೋರ್ಟ್ ಓಕೆ

ಏ.25ರಂದು ಅಖಿಲ ಭಾರತ ಮಜ್ಲಿಸ್ -ಇ-ಇತ್ತೇಹದುಲ್ ಮುಸ್ಲಿಮೀನ್(ಎಐಎಂಐಎಂ) ಪಕ್ಷ ಹಮ್ಮಿಕೊಂಡಿರುವ ಪಕ್ಷದ ಕಾರ್ಯಕ್ರಮದಲ್ಲಿ ...

ಬೆಂಗಳೂರು: ಏ.25ರಂದು ಅಖಿಲ ಭಾರತ ಮಜ್ಲಿಸ್ -ಇ-ಇತ್ತೇಹದುಲ್ ಮುಸ್ಲಿಮೀನ್(ಎಐಎಂಐಎಂ) ಪಕ್ಷ ಹಮ್ಮಿಕೊಂಡಿರುವ ಪಕ್ಷದ ಕಾರ್ಯಕ್ರಮದಲ್ಲಿ ಹೈದ್ರಾಬಾದ್‍ನಸಂಸದ ಅಸಾದುದ್ದೀನ್ ಒವೈಸಿ ನಗರಕ್ಕೆ ಪ್ರವೇಶಿಸದಂತೆ ನಗರ ಪೋಲೀಸ್ ಆಯುಕ್ತರು ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಶಿವಾಜಿನಗರದ ಛೋಟಾ ಮೈದಾನದಲ್ಲಿ ಎಐಎಂಐಎಂ ಪಕ್ಷದ ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮಕ್ಕೆ ಒವೈಸಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸ್ಥಳೀಯ ಮುಖಂಡರು ಅನುಮತಿ ಕೋರಿ ನಗರ ಪೊಲೀಸ್ ಕಮಿಷನರ್  ಗೆ ಮನವಿ ಸಲ್ಲಿಸಿದ್ದರು   ಆದರೆ ಕಮಿಷ ನರ್  ಆ ಮನವಿಯನ್ನು ಸಾರಾಸಗಟಾಗಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಒವೈಸಿ ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ವೇಳೆ ಸರ್ಕಾರದ ಹೆಚ್ಚುವರಿ  ಅಡ್ವೊಕೇಟ್  ಜನರಲ್  ಎ.ಎಸ್ ಪೊನ್ನಣ್ಣ ವಾದ ಮಂಡಿಸಿ, ಓವೈಸಿ ಕೋಮು ಪ್ರಚೋದನೆಗೆ ಹೆಸರಾದ ವ್ಯಕ್ತಿ. ಒಂದು ವೇಳೆ ಇವರಿಗೆ ಪಕ್ಷದ ಸಮಾವೇಶದಲ್ಲಿ ಮಾತನಾಡಲು ಅವಕಾಶ ಕೊಟ್ಟರೆ ಇಲ್ಲಿನ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಒವೈಸಿ ಮಾತನಾಡುವವಿಷಯಗಳು ಇವರ ಪ್ರತಿಸ್ಪರ್ಧಿ  ಎಂಬಂತಿರುವ ವಿಶ್ವ ಹಿಂದೂ ಪರಿಷತ್‍ನ ಮುಖಂಡ ಪ್ರವೀಣ್ ತೊಗಾಡಿಯಾರಿಗೆ ಉತ್ತಮ ಆಆಹಾರವಾಗುತ್ತವೆ. ಇದರಿಂದ ಕೋಮು ಸಾಮರಸ್ಯಕ್ಕೆ ಹಾನಿ ಉಂಟಾಗುತ್ತದೆ. ಅಲಹಾಬಾದಿನಲ್ಲೋ ಒವೈಸಿ ಭಾಷಣಕ್ಕೆ  ನಿರ್ಬಂಧ ವಿಧಿಸಲಾಗಿದೆ. ಇದನ್ನು ಅಲ್ಲಿನ ಸ್ಥಳೀಯ ಕೋರ್ಟ್ ಪುರಸ್ಕರಿಸಿದೆ. ಆದ್ದರಿಂದ ಈ ವಿಷಯದಲ್ಲಿ ಕಮಿಷನರ್ ಅವರು ಕಾನೂನು ಮೀರಿ ನಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಒವೈಸಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ಓವೈಸಿ ಅವರ ಬೆಂಗಳೂರು ಪ್ರವೇಶ ಮತ್ತು ಭಾಷಣಕ್ಕೆ ನಿರ್ಬಂಧ ವಿಧಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ.
ಸರ್ಕಾರಕ್ಕೆ ಏನಾದರೂ ಅನುಮಾನಗಳಿದ್ದರೆ ಬಿಗಿ ಬಂದೋಬಸ್ತ್ ಮಾಡಿಕೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂದು ವಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!