ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರ ರಕ್ಷಣೆ

ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ...

ಬೆಂಗಳೂರು: ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ.

ರಕ್ಷಣೆಗೊಳಗಾಗಿರುವ ಒಬ್ಬ ನಟಿ ತಮಿಳಿನ `ಮುತಲ್ ಮನಾವನ್' ಪ್ರಮುಖ ಪಾತ್ರದಲ್ಲಿ ನಟಿಸಿದ್ದಾಳೆ. ಅಲ್ಲದೇ ಕನ್ನಡ, ತಮಿಳು ಸೇರಿದಂತೆ ಹಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ನಿರ್ವಹಿಸಿದ್ದಾಳೆ. ಮತ್ತೊಬ್ಬ ನಟಿ ರಾಜ್ಯದ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ `ಅಶ್ವಿನಿ ನಕ್ಷತ್ರ' ಮತ್ತು `ಬದುಕು' ಧಾರಾವಾಹಿಗಳಲ್ಲೂ ನಟಿಸಿದ್ದಾರೆ ಎಂದು ಪೊಲೀಸರು
ತಿಳಿಸಿದ್ದಾರೆ.

ಸಿನಿಮಾ ಧಾರಾವಾಹಿಗಳಲ್ಲಿ ಅವಕಾಶಕ್ಕಾಗಿ ಪರದಾಡುವ, ಬಡ ಹಾಗೂ ಮಧ್ಯಮ  ವರ್ಗದ ಯುವತಿ ಯರನ್ನು ಲಕ್ಷಾಂತರ ಹಣ ಗಳಿಸಬಹುದೆಂದು ಪುಸಲಾಯಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ಸವಿತಾ(46), ಪುಷ್ಪಾ(32) ಮತ್ತು ವಿಜಯಾ(45)ರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಬನಶಂಕರಿ 2ನೇ ಹಂತ ಹೊಸಕೆರೆಹಳ್ಳಿ 7ನೇ ಮುಖ್ಯ ರಸ್ತೆಯಲ್ಲಿನ ವಸತಿ ಸಮುಚ್ಛಯದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಒಂದು ಮನೆಯಲ್ಲಿ ಪುಷ್ಪಾ ನೆಲೆಸಿದ್ದು, ಪಕ್ಕದಲ್ಲಿದ್ದ ಮತ್ತೊಂದು ಮನೆಯನ್ನು ಬಾಡಿಗೆ ಪಡೆದು ದಂಧೆಗೆ ಬಳಸುತ್ತಿದ್ದರು. ವೇಶ್ಯಾವಾಟಿಕೆ ದಂಧೆ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ
ಸಿಸಿಬಿ ಮಹಿಳಾ ಮತ್ತು ಮಾದಕದ್ರವ್ಯ ದಳ ಪೊಲೀಸರು ದಾಳಿ ನಡೆಸಿದಾಗ ದಂಧೆ ಬಯಲಾಗಿದೆ. ನಟಿಯರು ಮಾತ್ರವಲ್ಲದೆ, ರಾಜ್ಯದ ಬೇರೆ ಬೇರೆ ಭಾಗಗಳಿಂದ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT