ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಾರು ಖರೀದಿಗೆ ಮಾಲೀಕನ ಮನೆಗೇ ಕನ್ನ!

ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದವನನ್ನು ಬಂಧಿಸಿರುವ ಎಚ್‍ಎಎಲ್ ಪೊಲೀಸರು ರು.7 ಲಕ್ಷ ಮೌಲ್ಯದ 230 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದವನನ್ನು ಬಂಧಿಸಿರುವ ಎಚ್‍ಎಎಲ್ ಪೊಲೀಸರು ರು.7 ಲಕ್ಷ ಮೌಲ್ಯದ 230 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಒಡಿಶಾದ ಭುವನೇಶ್ವರ ಮೂಲದ ಅಜಯ್ ಕುಮಾರ್(40) ಬಂಧಿತ. ಮಾರತ್ತಹಳ್ಳಿ ನಾಗಾರ್ಜುನ ಸೆರೆನ್ ಅಪಾರ್ಟ್‍ಮೆಂಟ್‍ವೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಮನೆಯಲ್ಲಿ ಹಲವು ವರ್ಷಗಳಿಂದ ಅಜಯ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಬಚ್ಚಿಟ್ಟಿದ್ದ. ಐದಾರು ದಿನಗಳ ಬಳಿಕ ಚಿನ್ನಾಭರಣ ಕಳವಾಗಿರುವುದು ತಿಳಿದ ಮನೆ ಮಾಲೀಕರು ಎಚ್‍ಎಎಲ್ ಪೊಲೀಸ್ ಠಾಣೆಗೆ ತೆರಳಿ ಏ.22ರಂದು ದೂರು ನೀಡಿದ್ದರು.

ದೂರು ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಅಜಯ್ ಚಿನ್ನಾಭರಣ ಸಮೇತ ತನ್ನ ಊರಿಗೆ ಪರಾರಿಯಾಗಲು ಕೆ.ಆರ್.ಪುರ ರೈಲು ನಿಲ್ದಾಣಕ್ಕೆ ತೆರಳಿದ್ದ. ಮಾಹಿತಿ ಸಂಗ್ರಹಿಸಿದ ಪೊಲೀಸರು, ರೈಲು ನಿಲ್ದಾಣದಲ್ಲೇ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಸ್ವಂತ ಕಾರು ಖರೀದಿಗೆ ಕಳವು: ಸ್ವಂತ ಕಾರು ಖರೀದಿಸಿ, ಬಿಸಿನೆಸ್ ಆರಂಭಿಸಲು ಆರೋಪಿ ತನ್ನ ಮಾಲೀಕರ ಬಳಿ ಹಲವು ದಿನಗಳಿಂದ ಹಣ ಕೇಳುತ್ತಿದ್ದ. ಆದರೆ, ಮಾಲೀಕರು ನಿರಾಕರಿಸಿದ್ದರಿಂದ ಹೊಸ ಕಾರು ಖರೀದಿ ಮಾಡಲೇಬೇಕು ಎಂದು ತೀರ್ಮಾನಿಸಿದ ಚಿನ್ನಾಭರಣ ಕದ್ದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel