ಡಿ.ಕೆ.ರವಿ 
ಜಿಲ್ಲಾ ಸುದ್ದಿ

ಡಿ.ಕೆ ರವಿ ಪ್ರಕರಣ: ನಗರಕ್ಕೆ ಶೀಘ್ರ ಏಮ್ಸ್ ತಜ್ಞ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಕೆಲ ಮಾಹಿತಿ ಕಲೆ ಹಾಕಲು ದೆಹಲಿಯ ಏಮ್ಸ್ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಸುಧೀರ್ ಗುಪ್ತಾ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಕೆಲ ಮಾಹಿತಿ ಕಲೆ ಹಾಕಲು ದೆಹಲಿಯ ಏಮ್ಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಸುಧೀರ್ ಗುಪ್ತಾ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿಗೆ ಭೇಟಿ ನೀಡಲಿರುವ ಗುಪ್ತಾ ಅವರು ಎರಡು ದಿನಗಳ ಕಾಲ ನಗರದಲ್ಲೇ ತಂಗುವ ನಿರೀಕ್ಷೆ ಇದೆ. ಆ ಸಮಯದಲ್ಲಿ ಡಿ.ಕೆ.ರವಿ
ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾದ ಕೋರಮಂಗಲದ ಫ್ಲಾಟ್ ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿ.ಕೆ.ರವಿ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ನಿಖರವಾಗಿ ಪತ್ತೆ ಹಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಆದ್ದರಿಂದ ಈ ಪ್ರಕರಣದ ಮರಣೋತ್ತರ ವರದಿಯ ಬಗ್ಗೆ ತಜ್ಞರ ಅಬಿsಪ್ರಾಯ ಪಡೆಯಲು ಸಿಬಿಐ ನಿರ್ಧರಿಸಿದೆ. ಅದಕ್ಕಾಗಿ ಏಮ್ಸ್ ವೈದ್ಯರ ಸಹಾಯ ಕೋರಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಾ ನಗರಕ್ಕೆ ಆಗಮಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ