ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ 
ಜಿಲ್ಲಾ ಸುದ್ದಿ

ಆರೋಪಪಟ್ಟಿ ಸಲ್ಲಿಕೆ ವಿಳಂಬಕ್ಕೆ ಆಯೋಗ ಆಕ್ಷೇಪ

ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರು ರಾಮಕಥಾ ಗಾಯಕಿ ಪ್ರೇಮ ಲತಾ ದಿವಾಕರ್ ಮೇಲೆ ನಡೆಸಿರುವ ಅತ್ಯಾಚಾರ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರು ರಾಮಕಥಾ ಗಾಯಕಿ ಪ್ರೇಮ ಲತಾ ದಿವಾಕರ್ ಮೇಲೆ ನಡೆಸಿರುವ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಐಡಿ ವಿಳಂಬ ಮಾಡುತ್ತಿರುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಐಡಿ ವಿಳಂಬ ನೀತಿ ಆರೋಪ ಹಿನ್ನೆಲೆಯಲ್ಲಿ ಕುಮಾರ ಮಂಗಳಂ ನೇತೃತ್ವದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯಕ್ಕೆ ಆಗಮಿಸಿ ಪ್ರೇಮಲತಾ ಹಾಗೂ ಪೋಲೀಸರಿಂದ ಮಾಹಿತಿ ಪಡೆದರು.
ಬೆಂಗಳೂರಿಗೆ ಬಂದಿಳಿದು ನೇರವಾಗಿ ಪ್ರೇಮಲತಾ ಅವರ ಬನಶಂಕರಿಯಲ್ಲಿರುವ ನಿವಾಸಕ್ಕೆ ತೆರಳಿ, ಪ್ರೇಮಲತಾ ಹಾಗೂಕುಟುಂಬ ಸದಸ್ಯರ ಜತೆ ಸುದೀರ್ಘ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 3 ತಿಂಗಳ ಹಿಂದೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಎರಡು ಬಾರಿ ಆಯೋಗದ ಅಧಿಕಾರಿಗಳು ಭೇಟಿ ಕೊಟ್ಟಿದ್ದರು. ಇದೀಗ ಮೊದಲ ಬಾರಿಗೆ ಪ್ರೇಮಲತಾ ದಂಪತಿಯನ್ನು ಸಂಪರ್ಕ ಮಾಡಿ ಅವರಿಂದ ಹೇಳಿಕೆ ಪಡೆಯಲಾಗಿದೆ ಎಂದರು.
ನಿರಂತರವಾಗಿ ಬೆದರಿಕೆಗಳು ಬರುತ್ತಿವೆ. ಬೇರೆ ಬೇರೆ ಠಾಣೆ ಗಳಲ್ಲಿ ಈಗಾಗಲೇ ದೂರು ದಾಖಲಿಸಲಾಗಿದೆ. ತನಿಖೆ ನಡೆಯುವ ಸ್ಥಳಗಳಿಗೆ ಹೋದರೆ ಅವಮಾನಕಾರಿಯಾಗಿ ಮಾತನಾಡುತ್ತಾರೆ, ನಿಂದಿಸಿ, ಬೆದರಿಕೆ ಒಡ್ಡುತ್ತಾರೆ.ಈ ಮೂಲಕ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂದು ಪ್ರೇಮಲತಾ ಹೇಳಿದ್ದಾರೆ. ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್, ಸಿಐಡಿ ಪೊಲೀಸರನ್ನು ಹಾಗೂ ಕಾನೂನು ಸಚಿವರನ್ನು ಭೇಟಿ ಮಾಡಿ ತನಿಖೆ ವಿಳಂಬ ಕುರಿತು ಮಾಹಿತಿ ಪಡೆಯಲಾಗುತ್ತದೆ. ಆಗ ಮಾತ್ರ ಪ್ರಕರಣದ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯ ಎಂದರು. ರಾಮಕಥಾ ಗಾಯಕಿಯಾಗಿರುವ ಪ್ರೇಮಲತಾ ದಿವಾಕರ್ ಅವರ ಮೇಲೆ ಹೊಸನಗರ ತಾಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರಶ್ರೀ ನಿರಂತರವಾಗಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಕೊಲೆ ಬೆದರಿಕೆಯು ಇದೆ ಎಂದು ಆರೋಪಿಸಿ ಪ್ರೇಮಲತಾ ಅವರು ಹೊನ್ನಾವರ, ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಆದರೆ, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ವಿಳಂಬಗೊಳಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನೊಂದೆಡೆ, ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಪ್ರೇಮಲತಾ ಅವರ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದರಾಜ್ಯದ ವಿವಿಧ ನಗರಗಳು ಹಾಗೂ ಹೊರ ರಾಜ್ಯಗಳಿಗೂ ಅವರನ್ನು ಕರೆದೊಯ್ದು ಮಾಹಿತಿ ಸಂಗ್ರಹಿಸಿದ್ದಾರೆ.

ಭಯದ ವಾತಾವರಣ
ಸಿಐಡಿ ತನಿಖಾಧಿಕಾರಿಗಳು ಒನ್‍ಸೈಡ್ ತನಿಖೆ ಮಾಡುತ್ತಿದ್ದಾರೆ. ಇತ್ತ ಪ್ರಕರಣದಲ್ಲಿ ನೊಂದ ಮಹಿಳೆಯಾಗಿರುವ ನಾನು ಹಾಗೂ ನನ್ನ ಕುಟುಂಬದ ಮೇಲೆ ಭಯದ ವಾತಾವರಣ ಸೃಷ್ಟಿಸಿ ಪ್ರಕರಣವನ್ನು ಸಂಪೂರ್ಣ ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿವೆ. ನಮಗೆ ಸೂಕ್ತ ರಕ್ಷಣೆ ಜತೆಗೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ನ್ಯಾಯ ಸಿಗುವ ಭರವಸೆ ಇದೆ ಎಂದು
ಗಾಯಕಿ ಪ್ರೇಮಲತಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT