ಬೆಂಗಳೂರು: ರಾಜಾಜಿನಗರ ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಾರ್ವಜನಿಕ ವಾಗಿ ಪ್ರತಿಜ್ಞೆ ಮಾಡಿದ್ದಾರೆ. `ಆಗಸ್ಟ್ 22ರಂದು ನಡೆಯುವ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿದ್ದು, ನನ್ನ ವಾಡ್ರ್ ನ ನಾಗರಿಕರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಅಗತ್ಯ ಸೌಲಭ್ಯಗಳ ಪೂರೈಕೆಗಾಗಿ ನನ್ನ ಸಂಪೂರ್ಣ ಸಮಯವನ್ನು ಪ್ರಾಮಾಣಿಕವಾಗಿ ವಿನಿಯೋಗಿಸುತ್ತೇನೆ.
ಸಾರ್ವಜನಿಕರ ಹಣ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುತ್ತೇನೆ.
ನನ್ನ ವಾರ್ಡಿನ ನಾಗರಿಕರಿಗೆ ಹಾಗೂ ಕಾರ್ಯಕರ್ತರಿಗೆ ಯಾವುದೇ ರೀತಿಯ ದ್ರೋಹ ಬಗೆಯುವುದಿಲ್ಲ. ವಾರ್ಡ್ ನ್ ಹಾಗೂ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯೇ ನನ್ನ ಪರಮ ಧ್ಯೇಯವಾಗಿರುತ್ತದೆ ಎಂದು ಭಗವಂತನ ಮೇಲೆ ಪ್ರಮಾಣ ಮಾಡುತ್ತೇನೆ' ಎಂದು ಪ್ರತಿಜ್ಞೆ ಸ್ವೀಕರಿಸಿದರು. ಈ ವೇಳೆ ಈ ಕ್ಷೇತ್ರದ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.