ಕೇಂದ್ರ ಸಚಿವ ಅನಂತ್ ಕುಮಾರ್ 
ಜಿಲ್ಲಾ ಸುದ್ದಿ

ಬೆಂಗಳೂರಿಗೆ ಸ್ಮಾರ್ಟ್ ಸಿಟಿ ತಪ್ಪಲು ಸಿಎಂ ಹೊಣೆ: ಅನಂತ್ ಕುಮಾರ್

ಬೆಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ತಪ್ಪಿಸುವ ಘೋರ ಅಪರಾಧವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಮಾಡಿದ್ದಾರೆ ...

ಬೆಂಗಳೂರು: ಬೆಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ತಪ್ಪಿಸುವ ಘೋರ ಅಪರಾಧವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿಗೆ ನಗರಗಳ ಆಯ್ಕೆ ಸಂದರ್ಭದಲ್ಲಿ ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯನ್ನು ಕೈ ಬಿಡಲಾಗಿದೆ. ರಾಜ್ಯಸರ್ಕಾರವೇ ನೇಮಿಸಿದ ಮೌಲ್ಯಾಂಕನ ಸಮಿತಿಯು ಬೆಂಗಳೂರನ್ನು ಪರಿಗಣಿಸಿಲ್ಲ. ಹೀಗಾಗಿ ಸ್ಮಾರ್ಟ್ ಸಿಟಿ ಅವಕಾಶ ಬೆಂಗಳೂರಿಗೆ ಕೈತಪ್ಪಿದೆ ಎಂದು ವಿವರಿಸಿದರು.

ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ ಸ್ಮಾರ್ಟ್ ಸಿಟಿ ಅವಕಾಶ ಸಿಗಬೇಕಾಗಿತ್ತು ಎಂದು ಅಭಿಪ್ರಾಯಪಟ್ಟ ಅವರು, ಸ್ಮಾರ್ಟ್ ಸಿಟಿಯೋಜನೆಗೆ ಬೆಂಗಳೂರನ್ನು ಸೇರಿಸುವಂತೆ ರಾಜ್ಯ ಸರ್ಕಾರದಿಂದ ಯಾವುದೇ ಮನವಿ ಬಂದಿಲ್ಲ. ತೆರಿಗೆ ವಸೂಲಾತಿ ಹಾಗೂ ಕೇಂದ್ರದ ಯೋಜನೆಗಳ ಅನುಷ್ಠಾನಗಳನ್ನು ಮುಂದಿನ ದಿನದಲ್ಲಿ ಸರಿಯಾಗಿ ನಿರ್ವಹಿಸುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಪತ್ರ ಬರೆಯುವ ಮೂಲಕ ಬೆಂಗಳೂರನ್ನು ಸ್ಮಾರ್ಟ್ ಸಿಟಿಗೆ ಸೇರಿಸಿಕೊಳ್ಳಲು ಮನವಿ ಮಾಡಬಹುದಾಗಿತ್ತು. ಆದರೆ ರಾಜಕೀಯ ಉದ್ದೇಶಕ್ಕೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿಲ್ಲ ಎಂದು ಟೀಕಿಸಿದರು.

ಬೆಂಗಳೂರು ಗೆಲ್ಲಬೇಕು, ಬೆಂಗಳೂರ ನ್ನು ಗೆಲ್ಲಿಸಲು ಬಿಜೆಪಿಯನ್ನು ಗೆಲ್ಲಿಸಿ ಎಂದು ಬೆಂಗಳೂರಿನ ನಾಗರಿಕರ ಮುಂದೆ ಹೋಗುತ್ತಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಚುನಾವಣೆಗೆ ಹೋಗುತ್ತಿದ್ದೇವೆ, ಗೆಲ್ಲುತ್ತೇವೆಂಬ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಆರ್. ಅಶೋಕ, ಶಾಸಕ ಅರವಿಂದ ಲಿಂಬಾವಳಿ, ಸಂಸದ ಪಿ.ಸಿ. ಮೋಹನ್, ಸುಬ್ಬನರಸಿಂಹ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ