ಮಾಜಿ ಮೇಯರ್ ಶಾಂತಕುಮಾರಿ 
ಜಿಲ್ಲಾ ಸುದ್ದಿ

ಮಾಜಿ ಮೇಯರ್ ಶಾಂತ ಕುಮಾರಿ ವಿರುದ್ಧ ನಾಳೆ ಚಾರ್ಜ್ ಶೀಟ್ ಸಲ್ಲಿಕೆ

ಮಾಜಿ ಮೇಯರ್ ಶಾಂತಕುಮಾರಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ...

ಬೆಂಗಳೂರು; ಮಾಜಿ ಮೇಯರ್ ಶಾಂತಕುಮಾರಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ. 5 ಸಾವಿರಕ್ಕೂ ಅಧಿಕ ಪುಟಗಳ ಆರೋಪಪಟ್ಟಿ ಸಿದ್ದಪಡಿಸಿರುವ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಶಾಂತಕುಮಾರಿ ಅವರು ತಮ್ಮ ಆದಾಯ ಕ್ಕಿಂತ ಶೇ.45ರಷ್ಟು ಅಧಿಕ ಆಸ್ತಿ ಸಂಪಾದಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಮೂಡಲಪಾಳ್ಯ ವಾರ್ಡ್‍ನಿಂದ ಆಯ್ಕೆಯಾಗಿದ್ದ ಶಾಂತಕುಮಾರಿ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ 2012ರ ಮಾರ್ಚ್ 16ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಶಾಂತಕುಮಾರಿ ಮನೆ ಹಾಗೂ ಕಚೇರಿಯಲ್ಲಿ ರೂ.1.29 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಇದರಲ್ಲಿ 750 ಗ್ರಾಂ ಚಿನ್ನಾಭರಣ, 3 ಕೆಜಿ ಬೆಳ್ಳಿ, ರೂ. 20 ಲಕ್ಷ ನಗದು, ಬ್ಯಾಂಕ್ ಖಾತೆಗಳು ಹಾಗೂ ಕನ್ನ ಮಂಗಲ ಬಳಿ 3 ಎಕರೆ ಜಮೀನು, ದೊಡ್ಡಬಳ್ಳಾಪುರದ ಮಧುರೈ ಬಳಿ 1 ಎಕರೆ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದವು.
ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಾಕಷ್ಟು ಸಾಕ್ಷ್ಯಾಧಾರಗಳು ಲಭಿಸಿರುವುದರಿಂದ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು ಆರೋಪಪಟ್ಟಿ ಸಲ್ಲಿಕೆಯಾಗಲಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!