ಮಹೇಂದ್ರ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ : 3 ಸಾವು
ಇಲ್ಲಿನ ನರಸಿಂಹ ತೀರ್ಥ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ ಹೊಡೆದು ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ...
ಮುಳಬಾಗಿಲು: ಇಲ್ಲಿನ ನರಸಿಂಹ ತೀರ್ಥ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ ಹೊಡೆದು ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಆಂಧ್ರ ಕಡೆಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಕೆಎಸ್‌ಆರ್‌ಟಿಸಿ ಡಿಪೋ ಬಳಿ ಕಾರಿಗೆ ಹಾಲಿನ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಹರೀಶ್, ಶ್ರೀನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರನ್ನು ಬೆಂಗಳೂರಿನ ನಾಗರಬಾವಿಯ ನಿವಾಸಿಗಳಾದ ವೈಷ್ಣವಿ(28), ಮಂಗಳ ಜ್ಯೋತಿ(56), ಬೃಂದಾ (58) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಅಬ್ದುಲ್ ರೆಹಮಾನ್, ಸರ್ಕಲ್ ಇನ್ಸ್‌ಪೆಕ್ಟರ್ ಎನ್.ಎನ್.ರಾಮರೆಡ್ಡಿ, ಸಬ್‌ಇನ್ಸ್‌ಪೆಕ್ಟರ್ ಎಂ.ಶಂಕರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.